ತುಮಕೂರು | 2024ರ ಲೋಕಸಭೆ ಚುನಾವಣೆಗೆ (Lok Sabha Elections) ತುಮಕೂರು (Tumkur) ಜಿಲ್ಲಾಡಳಿತ ಫುಲ್ ಅಲರ್ಟ್ ಆಗಿದ್ದು, ಮಾದರಿ ನೀತಿ ಸಹಿತ (With model policy) ಜಾರಿಯಾದಾಗಿನಿಂದ ಶಿಸ್ತುಕ್ರಮಕ್ಕೆ ಮುಂದಾಗಿದೆ. ಹೀಗಾಗಿ ತುಮಕೂರು ಜಿಲ್ಲೆಯಲ್ಲಿ ಚೆಕ್ ಪೋಸ್ಟ್ ಗಳನ್ನು (Check post) ಹಾಕಲಾಗಿದ್ದು ಜಿಲ್ಲಾಧಿಕಾರಿ ಸೇರಿದಂತೆ ಇತರೆ ಅಧಿಕಾರಿಗಳು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೌದು,, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ ವಿ ಅಶೋಕ್ ಅವರು ಶನಿವಾರ ಮಧ್ಯ ರಾತ್ರಿ ತುಮಕೂರು ನಗರ ಹಾಗೂ ಗ್ರಾಮಾಂತರ, ಗುಬ್ಬಿ ಪಟ್ಟಣದ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ತುಮಕೂರು ನಗರ ವ್ಯಾಪ್ತಿಯ ಶಿರಾ ಗೇಟ್, ಬಟವಾಡಿ, ಕ್ಯಾತಸಂದ್ರ ಟೋಲ್, ಗೂಳೂರು ಸರ್ಕಲ್, ತುಮಕೂರು ಗ್ರಾಮಾಂತರ ವ್ಯಾಪ್ತಿಯ ಮಲ್ಲಸಂದ್ರ, ಗುಬ್ಬಿ ಪಟ್ಟಣ ಸೇರಿದಂತೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ನಿಯೋಜಿತ ಅಧಿಕಾರಿ ಸಿಬ್ಬಂದಿಗಳ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದರಲ್ಲದೆ ಚೆಕ್ ಪೋಸ್ಟ್ ಮೂಲಕ ಹಾದು ಹೋದ ವಾಹನಗಳನ್ನು ತಪಾಸಣೆ ಮಾಡಿದರು.