ಬೆಂಗಳೂರು | ಲೋಕಸಭಾ ಚುನಾವಣೆ (Lok Sabha Elections) ಹಿನ್ನೆಲೆಯಲ್ಲಿ ದೇಶಾದ್ಯಂತ ಪ್ರಚಾರ ನಡೆಯುತ್ತಿದ್ದು, ಸಮಾವೇಶಗಳು, ಸಭೆಗಳು, ರ‍್ಯಾಲಿಗಳು ಹಾಗೂ ರೋಡ್ ಶೋಗಳನ್ನು (Road show) ಆಯೋಜನೆ ಮಾಡಲಾಗುತ್ತಿದೆ. ಇದೀಗ ಏಪ್ರಿಲ್ 14ರಂದು ಕರ್ನಾಟಕಕ್ಕೆ (Karnataka) ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಲಿದ್ದು, ಈ ವೇಳೆ ರೋಡ್ ಶೋ ಸಹ ನಡೆಯಲಿದೆ.
ಚಿಕ್ಕಬಳ್ಳಾಪುರದಲ್ಲಿ ಮಧ್ಯಾಹ್ನ 3 ಗಂಟೆಗೆ ಸಮಾವೇಶವನ್ನು ನಡೆಸಲಿದ್ದಾರೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಯಲಿದ್ದು, ಬ್ಯಾಟರಾಯನಪುರ ಮತ್ತು ಹೆಬ್ಬಾಳ ಕ್ಷೇತ್ರ ಒಳಗೊಂಡಂತೆ ರೋಡ್ ಶೋವನ್ನು ಆಯೋಜನೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಬಿಜೆಪಿಯು ಇಂದು ರೋಡ್ ಮ್ಯಾಪ್ ಅನ್ನು ಸಿದ್ಧಪಡಿಸಲಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಪ್ರಧಾನಿ ನರೇಂದ್ರ ಮೋದಿಯವರ ಅಲೆಯನ್ನೇ ಈಗಲೂ ಬಳಕೆ ಮಾಡಿಕೊಳ್ಳಲು ಬಿಜೆಪಿ ಅಭ್ಯರ್ಥಿಗಳು ಮುಂದಾಗಿದ್ದಾರೆ. ಅವರು ಕೊಟ್ಟ ಕೊಡುಗೆಯ ಮೂಲಕ ಮತ ಪ್ರಚಾರ ನಡೆಸುತ್ತಿದ್ದಾರೆ. ಕುತೂಹಲ ಮೂಡಿಸಿರುವ ಕ್ಷೇತ್ರಗಳಲ್ಲಿ ಈಗ ಮೋದಿ ಮೇನಿಯಾ ಆರಂಭವಾಗಲಿದೆ.