ಬೆಂಗಳೂರು | ಹೊಸ ವರ್ಷ ಸಂಭ್ರಮಾಚರಣೆಗೆ (New Year celebration) ದಿನಗಣನೆ ಆರಂಭವಾಗಿದ್ದು, ನೂತನ ಸಂವತ್ಸರ ಸ್ವಾಗತಿಸಲು ರಾಜ್ಯ ರಾಜಧಾನಿ ಸಜ್ಜುಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವ ಸಲುವಾಗಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ಈ ಬಗ್ಗೆ ಪೊಲೀಸ್ ಆಯುಕ್ತ ಬಿ. ದಯಾನಂದ್ ಮಾತನಾಡಿ, ನಗರದಲ್ಲಿ ಅಹಿತಕರ ಘಟನೆ ಆಗದಂತೆ ಕಟ್ಟೆಚ್ಚರ ವಹಿಸಲಾಗಿದೆ. ಸಿಸಿಬಿ ಸೇರಿದಂತೆ ಎಲ್ಲಾ ವಿಭಾಗದವರು ಡ್ರಗ್ಸ್ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ. ಹೊಸ ವರ್ಷದ ವೇಳೆ ಡ್ರಗ್ ಹರಿದಾಡದಂತೆ ಸಿಸಿಬಿ ಸೇರಿ ಎಲ್ಲಾ ವಿಭಾಗದ ಪೊಲೀಸರು ಡ್ರಗ್ಸ್ ವಿರುದ್ದ ಕಾರ್ಯಾಚರಣೆ ನಡೆಸಿದ್ದಾರೆ.
ಹಳೇ ಡ್ರಗ್ ಪೆಡ್ಲರ್ಗಳು, ರೌಡಿ ಹಿನ್ನೆಲೆಯುಳ್ಳವರ ತಪಾಸಣೆ ನಡೆಯುತ್ತಿದ್ದು, ಹೊಸ ವರ್ಷ ಆಯೋಜಕರನ್ನು ಕರೆಸಿ ಸಲಹೆ ಸೂಚನೆ ನೀಡಲಾಗುತ್ತಿದೆ ಎಂದಿದ್ದಾರೆ. ಇನ್ನೂ ಬೇರೆ ಬೇರೆ ಇಲಾಖೆ ಜೊತೆಯೂ ಹೊಸ ವರ್ಷ ಆಚರಣೆ ಬಗ್ಗೆ ಚರ್ಚೆಯಾಗುತ್ತಿದೆ. ಎಲ್ಲೆಲ್ಲಿ ಲೈಟಿಂಗ್ ಆಗಬೇಕು. ಬೇರೆ ವ್ಯವಸ್ಥೆ ಹೇಗೆ ಇರುಬೇಕು ಎಂಬ ಬಗ್ಗೆ ಚರ್ಚೆ ನಡೆಸಿ ತಿರ್ಮಾನಿಸಲಾಗುವುದು ಎಂದಿದ್ದಾರೆ.