ನವದೆಹಲಿ | 24ರ ಲೋಕಸಭೆ ಚುನಾವಣೆಯಲ್ಲಿ (lok sabha election) ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು (Tamil Nadu) ಯಾವುದಾದರೂ ಒಂದು ರಾಜ್ಯದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala seetharaman) ಸ್ಪರ್ಧೆ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಈ ಬಗ್ಗೆ ಸ್ವತಹ ನಿರ್ಮಲಾ ಸೀತಾರಾಮನ್ ಅವರೇ ಸ್ಪಷ್ಟನೆಯನ್ನು ನೀಡಿದ್ದಾರೆ.
ಹೌದು,,, 2024ರ ಲೋಕಸಭೆ ಚುನಾವಣೆಯಲ್ಲಿ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಕಾರಣ ಕೊಟ್ಟಿರುವ ಅವರು ನನ್ನ ಬಳಿ ಚುನಾವಣೆ ಎದುರಿಸುವಷ್ಟು ಹಣವಿಲ್ಲ ಹೀಗಾಗಿ ನಾನು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿಲ್ಲ ಎಂದು ತಿಳಿಸಿದ್ದಾರೆ.
ಪಕ್ಷ ನನಗೆ ಆಂಧ್ರ ಪ್ರದೇಶ ಅಥವಾ ತಮಿಳುನಾಡಿನಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು. ಹತ್ತು ದಿನ ಆಲೋಚಿಸಿ ಬೇಡ ಎಂದೆ. ಯಾಕೆಂದರೆ ನನ್ನ ಬಳಿ ಹಣವಿಲ್ಲ. ಆಂಧ್ರ ಮತ್ತು ತಮಿಳುನಾಡಿನಲ್ಲಿ ಜಾತಿ ಮತ್ತು ಧರ್ಮವನ್ನೂ ಪರಿಗಣಿಸುತ್ತಾರೆ. ಅದಕ್ಕಾಗಿಯೇ ಸ್ಪರ್ಧಿಸುವುದಿಲ್ಲ ಅಂತ ಹೇಳಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.