ಬೆಂಗಳೂರು | ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಎರಡನೆಯ ಅವಧಿಗೆ ಸಿದ್ದರಾಮಯ್ಯ ಇತ್ತೀಚಿಗಷ್ಟೇ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಇದೀಗ ಅವರ ಬೆಂಬಲಿಗರು, ಪಕ್ಷದ ಕಾರ್ಯಕರ್ತರು, ನಾಯಕರು ಅವರಿಗೆ ಹಾರ-ತುರಾಯಿ ಹಿಡಿದು ಸನ್ಮಾನ ಮಾಡಲು ಮುಂದಾಗುತ್ತಿದ್ದಾರೆ.
ಇದೆಲ್ಲವನ್ನು ಅರಿತ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಭಿಮಾನಿಗಳು, ಹಿತೈಷಿಗಳು, ಪಕ್ಷದ ಕಾರ್ಯಕರ್ತರಿಗೆ ಸೂಚನೆಯನ್ನು ನೀಡಿದ್ದಾರೆ. ಅಂದರೆ ಸಾರ್ವಜನಿಕರಿಂದ ಗೌರವ, ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದಾರೆ.
ಇದು ನನ್ನ ಮನೆ, ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗಲಿದೆ. ನಿಮ್ಮ ಪ್ರೀತಿ ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ ಅಭಿಮಾನ ಸದಾ ನನ್ನ ಮೇಲೆ ಇರಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.