ತುಮಕೂರು | ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗಲ್ಲ ಕೆಲವೊಮ್ಮೆ ನಿಜವಾಗಿದೆ. ಕೆಲವೊಮ್ಮೆ ಸುಳ್ಳಾಗಿದೆ.. ಆದರೂ ಎಕ್ಸಿಟ್ ಪೋಲಲ್ಲಿ ಕಾಂಗ್ರೆಸ್ ಮುಂದಿದೆ.. ಕಾಂಗ್ರೆಸ್ ಪರ ಅಲೆ ಇರೋದು ಸಾಬೀತಾಗಿದೆ.. ಇನ್ನು ಏನಿದ್ದರೂ ಸಂಖ್ಯೆಯ ದೃಢೀಕರಣ ಅಷ್ಟೇ ಬಾಕಿ ಎಂದು ಚುನಾವಣೋತ್ತರ ಸಮೀಕ್ಷೆ ಹಿನ್ನೆಲೆಯಲ್ಲಿ ತುಮಕೂರಿನ ಸಿದ್ದಾರ್ಥನಗರದಲ್ಲಿ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು.
ನಾವು 130 ಸ್ಥಾನ ಪಡೆಯುತ್ತೇವೆ. ಸರ್ಕಾರ ರಚನೆ ಮಾಡಲು ನಾವು ಮಾನಸಿಕವಾಗಿ ಸಿದ್ದರಾಗಿದ್ದೇವೆ. ಸಿದ್ದರಾಮಯ್ಯ ಕೂಡ ವರುಣಾದಲ್ಲಿ ಯಾವುದೇ ತೊಂದರೆ ಇಲ್ಲದೇ ಗೆಲ್ಲುತ್ತಾರೆ. ನಾನು ಕೂಡ ಕೊರಟಗೆರೆಯಲ್ಲಿ ಹಿಂದಿಗಿಂತ ಹೆಚ್ಚಿನ ಬಹುಮತದಲ್ಲಿ ಗೆಲ್ಲುತ್ತೇನೆ ಎಂದರು.
2013 ರಲ್ಲಿ ನಾನು 120 ಸೀಟ್ ಬರುವ ಮುನ್ಸೂಚನೆ ಕೊಟ್ಟಿದ್ದೆ. ಆದರೆ 122 ಸ್ಥಾನ ಬಂದಿತ್ತು. ಈಗ ನಾನು 130 ಸ್ಥಾನ ಎಂದು ಹೇಳಿದ್ದೇನೆ. ನನ್ನ ಲೆಕ್ಕಾಚಾರ ಸರಿ ಆಗಬಹುದು ಎಂದರು.
ಸಿಎಂ ಬಗ್ಗೆ ಪರಮೇಶ್ವರ್ ಹೇಳಿದ್ದೇನು..?
ಸಿಎಂ ಆಯ್ಕೆ ವಿಚಾರ ಹೈ ಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು. ಸಿ ಎಲ್ ಪಿ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನ ತಗೋತಾರೆ.. ಈ ಸಂದರ್ಬದಲ್ಲಿ ಯಾರು ಒಳ್ಳೆಯ ಉತ್ತಮ ಆಡಳಿತ ಕೊಡುತ್ತಾರೋ ಅಂತವರನ್ನು ಹೈಕಮಾಂಡ್ ಸಿಎಂ ಮಾಡಬಹುದು. ಹೈ ಕಮಾಂಡ್ ನನಗೆ ಸಿಎಂ ಕೊಡ್ತಿನಿ ಅಂದರೆ ಬೇಡ ಅನ್ನುತ್ತೇನಾ..? ನಾನು ಸಿಎಂ ಆಗಬೇಕು ಎಂದು ಜಿಲ್ಲೆಯ ಅಭಿಮಾನಿಗಳ ಅಪೇಕ್ಷೆ ಇದೆ ಎಂದ ತಕ್ಷಣ ಅದು ಸಾಧ್ಯ ಆಗೋದಿಲ್ಲ. ಸಿಎಂ ಆಯ್ಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು ಎಂದರು.
ತುಮಕೂರು ಜಿಲ್ಲೆಯಲ್ಲೂ ಉತ್ತಮ ವಾತಾವರಣ ಇದೆ ಹೀಗಾಗಿ 6-7 ಸ್ಥಾನ ಗೆಲ್ಲುತ್ತೇವೆ ಎಂದು ತುಮಕೂರಿನ ಸಿದ್ದಾರ್ಥ ನಗರದಲ್ಲಿ ಮಾಜಿ ಡಿಸಿಎಮ್ ಡಾ.ಜಿ.ಪರಮೇಶ್ವರ್ ಹೇಳಿದ್ರು.