ಬೆಂಗಳೂರು | ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿದ್ದು ಇನ್ನೂ ಕೇವಲ ಒಂದೇ ಒಂದು ದಿನ ಮಾತ್ರ ಬಾಕಿ ಉಳಿದಿದೆ ಆದರೆ ಕಾಂಗ್ರೆಸ್ ಪಕ್ಷವಾಗಲಿ ಬಿಜೆಪಿ ಪಕ್ಷವಾಗಲಿ ಅಧಿಕೃತವಾಗಿ ಇಂದು ಯಾರು ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.
ಹೌದು,,, ವಿಧಾನಸಭೆಯಿಂದ ಪರಿಷತ್‌ನ 3 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂ.20 ಕೊನೆ ದಿನವಾದರೂ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿಲ್ಲ. 3 ಸ್ಥಾನಗಳು ಸಹಜವಾಗಿ ಕಾಂಗ್ರೆಸ್ ಪಾಲಾಗಲಿದೆ. ಆದರೆ ಅಭ್ಯರ್ಥಿಗಳು ಯಾರು ಎಂಬುದು ಇನ್ನು ಕುತೂಹಲವನ್ನು ಮೂಡಿಸಿದೆ.
ಇನ್ನೂ ಮಾಜಿ CM ಜಗದೀಶ್ ಶೆಟ್ಟರ್, ಮಾಜಿ ಸಚಿವ ಬಾಬುರಾವ್ ಚಿಂಚನಸೂರು & ಸಚಿವ NS ಬೋಸರಾಜು ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ. ಆದರೆ ಅಧಿಕೃತವಾಗಿ ಹೈಕಮಾಂಡ್ ಈ ಹೆಸರುಗಳನ್ನು ಪ್ರಕಟಿಸಿಲ್ಲ. ಇನ್ನು ಕೇವಲ ಒಂದೇ ಒಂದು ದಿನ ಮಾತ್ರ ಬಾಕಿ ಉಳಿದಿದ್ದು ಇಂದು ಅಧಿಕೃತವಾಗಿ ಘೋಷಣೆ ಮಾಡುವ ಎಲ್ಲಾ ಸಾಧ್ಯತೆಗಳು ಇವೆ.
ಇನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುವುದು ಖಚಿತವಾಗಿದ್ದರೂ ಕೂಡ ಸ್ಪರ್ಧೆ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಈ ಹಿಂದೆಯೇ ಹೇಳಿದ್ದರು. ಪ್ರತಿಪಕ್ಷವಾಗಿ ಸ್ಪರ್ಧಿಸುವುದಾಗಿ ಬಿಜೆಪಿ ಕೂಡ ಹೇಳಿದ್ದರೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.