ಬೆಂಗಳೂರು ಗ್ರಾಮಾಂತರ | ಚಲಿಸುತ್ತಿದ್ದ ವೇಳೆ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು ಟಿಪ್ಪರ್ ಕೆಳಕ್ಕೆ ಬಿದ್ದ ಒರ್ವ ಸವಾರ ಸ್ಥಳದಲ್ಲೆ ಸಾವನ್ನಪ್ಪಿ ಮತ್ತೋರ್ವ ಬೈಕ್ ಸವಾರನ ಸ್ಥಿತಿ ಗಂಭೀರವಾಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ನಡೆದಿದೆ.
ಮೃತಪಟ್ಟ ಯುವಕನನ್ನು 25 ವರ್ಷದ ದರ್ಶನ್ ಎಂದು ಗುರುತಿಸಲಾಗಿದೆ. ಕೋಲಾರದ ಕಡೆಯಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಪ್ಯಾಷನ್ ಪ್ರೋ ಮತ್ತು ಸ್ಕೂಟಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಟಿಪ್ಪರ್ ಚಕ್ರದ ಕೆಳಗೆ ಸಿಲುಕಿ ದರ್ಶನ್ ಸಾವನ್ನಪ್ಪಿದ್ದಾನೆ.
ಗಾಯಗೊಂಡ ಬೈಕ್ ಸವಾರನನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರ-ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.