Operation Kamala | ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರಲ್ಲ – ಸಿದ್ದರಾಮಯ್ಯ

Operation Kamala

ವಿಜಯನಗರ | ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ (Operation Kamala) ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಲೇವಡಿ ಮಾಡಿದರು.

Operation Kamala

ಹೊಸಪೇಟೆಯಲ್ಲಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹ ಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ ಎಂದರು.

ಇದನ್ನೂ ಓದಿ : Orange Alert | ರಾಜ್ಯಾದ್ಯಂತ ಭಾರೀ ಮಳೆಯ ಮುನ್ಸೂಚನೆ:  ಆರೆಂಜ್ ಅಲರ್ಟ್ ಘೋಷಣೆ

2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ ಎಂದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದರು.

Follow Us on Facebook : https://www.facebook.com/profile.php?id=61556509312968

Leave a Reply

Your email address will not be published. Required fields are marked *