Home Blog Page 4

Legislative Council Elections | ಲೋಕಸಭೆ ಚುನಾವಣೆ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ ಕಾವು..!

ಬೆಂಗಳೂರು | ಲೋಕಸಭೆ ಚುನಾವಣೆ (Lok Sabha Elections) ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿ (Karnataka) ವಿಧಾನ ಪರಿಷತ್ ಚುನಾವಣೆ (Legislative Council Elections) ಕಾವೇರಲಿದೆ. ಪರಿಷತ್ ನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ದಿನಾಂಕ ಪ್ರಕಟಿಸಲಾಗಿದೆ.

Bangalore Rave Party | ಬೆಂಗಳೂರಿನ ರೇವ ಪಾರ್ಟಿಯಲ್ಲಿ ಸಿಕ್ಕಿಬಿದ್ದ ತೆಲುಗು ನಟಿಯರು..! – karnataka360.in

ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ. ವಿಧಾನಪರಿಷತ್ ನ 11 ಸದಸ್ಯರ ಅಧಿಕಾರಾವಧಿ ಜೂನ್ 11 ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಈ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಜೂನ್ 13 ರಂದು ಮತದಾನ ಪ್ರಕ್ರಿಯೆ ನಡೆಯಲಿದೆ. ಅದೇ ದಿನ ಫಲಿತಾಂಶವೂ ಪ್ರಕಟವಾಗಲಿದೆ.

ಜೂನ್ 3 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ನಾಲ್ಕರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 6 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಜೂನ್ 13 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಈಗಿನ ಲೆಕ್ಕಾಚಾರದ ಪ್ರಕಾರ ವಿಧಾನಸಭೆಯ ಬಲಾಬಲವನ್ನಾಧಿರಿಸಿ 11 ರಲ್ಲಿ 7 ಸ್ಥಾನ ಕಾಂಗ್ರೆಸ್ ಪಾಲಾಗಲಿದೆ. ಉಳಿದಂತೆ ಬಿಜೆಪಿಗೆ ಮೂರು, ಜೆಡಿಎಸ್ ಗೆ ಒಂದು ಸ್ಥಾನ ದೊರೆಯುವ ನಿರೀಕ್ಷೆಯಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಪರಿಷತ್ ಚುನಾವಣೆಯಲ್ಲೂ ಮುಂದುವರಿಯಲಿದೆ.

Mohanlal Dr. Raj Kumar song | ವರನಟ ಡಾ. ರಾಜ್ ಕುಮಾರ್ ಹಾಡು ಕೇಳುತ್ತಾ ಮೈಮರೆತ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್

ಮನರಂಜನೆ | ಮಲಯಾಳಂ (Malayalam) ಸೂಪರ್ ಸ್ಟಾರ್ ಮೋಹನ್ ಲಾಲ್ (Mohanlal) ಕನ್ನಡದ ವರನಟ ಡಾ. ರಾಜ್ ಕುಮಾರ್ (Dr. Raj Kumar) ಅವರ ಹಳೆಯ ಹಾಡೊಂದನ್ನು ನೋಡುತ್ತಾ ತಾನೂ ಹಾಡುತ್ತಾ ಎಂಜಾಯ್ ಮಾಡುತ್ತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ (Social media) ವೈರಲ್ ಆಗಿದೆ.

ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಕನ್ನಡದಲ್ಲೂ ಬೆರಳೆಣಿಕೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದಿತ್ಯ ನಾಯಕರಾಗಿದ್ದ ಲವ್, ಪುನೀತ್ ರಾಜ್ ಕುಮಾರ್ ನಾಯಕರಾಗಿದ್ದ ಮೈತ್ರಿ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದ್ದರು. ಹೀಗಾಗಿ ಅವರಿಗೂ ಕನ್ನಡ ನಂಟಿದೆ.

ಕೇವಲ ನಟನಾಗಿ ಮಾತ್ರವಲ್ಲ, ಮೋಹನ್ ಲಾಲ್ ಮಲಯಾಳಂನಲ್ಲಿ ಗಾಯಕರಾಗಿಯೂ ಚಿಪರಿಚಿತರಾಗಿದ್ದಾರೆ. ಇದೀಗ ಮೋಹನ್ ಲಾಲ್ ಬಿಡುವಿನ ವೇಳೆಯಲ್ಲಿ ತಮ್ಮ ಐಪ್ಯಾಡ್ ನಲ್ಲಿ ಅಣ್ಣಾವ್ರ ಹಾಡನ್ನು ವೀಕ್ಷಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಕೇವಲ ವಿಡಿಯೋ ವೀಕ್ಷಣೆ ಮಾತ್ರವಲ್ಲ, ಆಕ್ಷನ್ ಸಮೇತ ಹಾಡಿಗೆ ತಾವೂ ಧ್ವನಿಗೂಡಿಸುತ್ತಾರೆ.

ಅಣ್ಣಾವ್ರ ಸೂಪರ್ ಹಿಟ್ ಹಾಡು ‘ಎಂದೆಂದೂ ನಿನ್ನನು ಮರೆತು’ ಹಾಡನ್ನು ಮೋಹನ್ ಲಾಲ್ ವೀಕ್ಷಣೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಹಾಡಿನ ಜೊತೆಗೆ ಅಣ್ಣಾವ್ರಂತೆ ಅಭಿನಯಿಸುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಇದು ಕನ್ನಡಿಗರ ಮನ ಸೆಳೆದಿದೆ. ಸರಿಯಾಗಿ ಕನ್ನಡ ಪದಗಳನ್ನು ಹೇಳಲು ಬಾರದೇ ಇದ್ದರೂ ಹಾಡಿನ ದಾಟಿಯನ್ನು ಗುನುಗಿದ್ದಾರೆ. ಅವರ ಈ ವಿಡಿಯೋಗೆ ಸಾವಿರಾರು ಲೈಕ್ಸ್ ಬಂದಿವೆ.

Tumkur Monsoon rain | ತುಮಕೂರು ಜಿಲ್ಲೆಯಲ್ಲಿ ಮಳೆ ಅಬ್ಬರ ; ಅಧಿಕಾರಿಗಳಿಗೆ ಡಿಸಿ ಶುಭ ಕಲ್ಯಾಣ್ ಖಡಕ್ ಸೂಚನೆ..!

ತುಮಕೂರು | ಮುಂಗಾರು ಮಳೆಯಿಂದ (Monsoon rain) ಸಂಭವಿಸಬಹುದಾದ ವಿವಿಧ ರೀತಿಯ ಪ್ರಾಕೃತಿಕ ವಿಕೋಪ (Natural disaster) ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ (Precautionary measure) ಮೂಲಕ ಜಿಲ್ಲೆಯಲ್ಲಿ ಯಾವುದೇ ಜೀವಹಾನಿಯಾಗದ ರೀತಿಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನೃದ್ದರಾಗಿರುವಂತೆ  ಜಿಲ್ಲಾಧಿಕಾರಿ ಶುಭ ಕಲ್ಯಾಣ್ (District Collector Shub Kalyan)  ನಿರ್ದೇಶನ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ  ನಡೆದ ‘ಮುಂಗಾರು-2024 ಪೂರ್ವಸಿದ್ದತೆ ಹಾಗೂ ಬರ ನಿರ್ವಹಣೆ ಮತ್ತು ಕಂದಾಯ ವಿಷಯಗಳಿಗೆ ಸಂಬಂಧಿಸಿದ  ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ಜಿಲ್ಲಾದ್ಯಂತ ಆಗಿರುವ ಮಳೆಯ ಪ್ರಮಾಣ,  ಅದರಿಂದ ಆದ ಹಾನಿ, ಬರ ನಿರ್ವಹಣೆ, ಮೊದಲಾದ ವಿಷಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ರಾಷ್ಟೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಗಾರು ಮಳೆ ಹಾಗೂ ಚಂಡಮಾರುತ ಪರಿಣಾಮಗಳನ್ನು ತಗ್ಗಿಸಲು ಕ್ಯೆಗೊಳ್ಳಬಹುದಾದ ಕ್ರಮಗಳ ಕುರಿತು ನೀಡಿರುವ ಸಲಹೆ ಸೂಚನೆಗಳ ರೀತ್ಯ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು, ಜಿಲ್ಲೆಯಲ್ಲಿ ಈ ಹಿಂದಿನ ವರ್ಷಗಳಲ್ಲಿ ಉಂಟಾದ ಘಟನೆಗಳಿಗೆ ಅನುಗುಣವಾಗಿ ಸಮಸ್ಯೆಗೆ ಒಳಗಾದ ಸ್ಥಳಗಳನ್ನು ಪರಿಶೀಲಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಯಾವುದೇ ಸಿದ್ಧತೆ ಮಾಡಿಕೊಳ್ಳದೆ ನಿರ್ಲಕ್ಷ ವಹಿಸುವಂತಹ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ತಿಪಟೂರು ತಾಲ್ಲೂಕಿನ ಹೆಚ್ ಭೈರಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ 8 ಮಿ.ಮಿ  ಮಳೆಯಾಗಿದ್ದು,   ಹೆಚ್ ಭೈರಾಪುರ   ರಸ್ತೆ, ಮೇಲ್ಸೇತುವೆ ಮೇಲೆ ನೀರು ಹರಿದು ಸಾರ್ವಜನಿಕರಿಗೆ ತೊಂದರೆ ಆಗಿರುವ ಕುರಿತು ಪರಿಶೀಲಿಸಿದ ಜಿಲ್ಲಾಧಿಕಾರಿಗಳು,  ಸ್ಥಳಕ್ಕೆ ಬೇಟಿ ನೀಡಿ, ಮುಂದೆ ಇಂತಹ ಘಟನೆ ಸಂಭವಿಸದ ರೀತ್ಯ ಕ್ಯೆಗೊಳ್ಳಬಹುದಾದ ಕ್ರಮಗಳ ಬಗ್ಗೆ  ವರದಿ ಸಲ್ಲಿಸುವಂತೆ ತಾಲ್ಲೂಕು ತಹಶೀಲ್ದಾರ್‌ಗೆ ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತೆ ಅಶ್ವಿಜ ಮಾತನಾಡಿ, ತುಮಕೂರು ನಗರದ ಶಾಂತಿನಗರ, ಎಸ್ ಮಾಲ್ ಮೊದಲಾದ ಸ್ಥಳಗಳಲ್ಲಿ ಮಳೆ ಬಂದಂಥ ಸಂದರ್ಭದಲ್ಲಿ ಸಮಸ್ಯೆ ಉಂಟಾಗಿದ್ದು, ತಕ್ಷಣ ಬಗೆಹರಿಸಲಾಗಿದೆ ಎಂದು ತಿಳಿಸಿದರು.

ತ್ವರಿತ ವರಧಿಗೆ ಸೂಚನೆ

ಸಿರಾ ತಾಲೋಕ್ ವ್ಯಾಪ್ತಿಯಲ್ಲಿ 6 ಹೇಕ್ಟರ್ ಬೆಳೆ ಹಾನಿಯಾಗಿರುವ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಹಾಗೂ ತೋಟಗಾರಿಗೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ ತಮ್ಮ ತಂಡಗಳೊಂದಿಗೆ, ಮಳೆಯಿಂದ ಹಾನಿಯಾಗಿರುವ ಬಗ್ಗೆ ಹಾನಿಗೊಳಗಾದ ರೈತರ ತೋಟಗಾರಿಕೆ, ಕೃಷಿ ಬೆಳೆಗಳ ಜಮೀನುಗಳಿಗೆ  ಖುದ್ದು ಭೇಟಿ ನೀಡಿ ಇಂದೇ ವರದಿ ಸಲ್ಲಿಸುವಂತೆ ಸೂಚಿಸಿದರು.

ತ್ಯಾಜ್ಯ ತೆರವು

ಜಿಲ್ಲೆಯಲ್ಲಿರುವ ಕೆರೆಗಳ ಆವರಣವನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಸೋರಿಕೆ ಇದ್ದಲ್ಲಿ ಅದನ್ನು ತಡೆಗಟ್ಟಲು ಸಣ್ಣ ನೀರಾವರಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಕೆರೆಗಳು, ಚರಂಡಿ, ಕಾಲುವೆಗಳಲ್ಲಿರುವ ತ್ಯಾಜ್ಯಗಳನ್ನು ತೆರವುಗೊಳಿಸಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಕ್ರಮವಹಿಸಬೇಕು. ಯಾವುದೇ ದುರಸ್ಥಿ ಇದ್ದಲ್ಲಿ ಅವುಗಳನ್ನು ಸಕಾಲದಲ್ಲಿ ನಿರ್ವಹಿಸಬೇಕು ಎಂದು ತಿಳಿಸಿದರು.

ಕೂಡಲೇ ಘಟನಾ ಸ್ಥಳಕ್ಕೆ ತೆರಳಿ

ಪ್ರಾಕೃತಿಕ ವಿಕೋಪ ಸಂಭವಿಸಿದ ಘಟನಾ ಸ್ಥಳಕ್ಕೆ ಕೂಡಲೇ ತಾಲೂಕು ಮಟ್ಟದ ಅಧಿಕಾರಿಗಳು ತೆರಳಿ, ಸಾರ್ವಜನಿಕ ಜೀವ, ಆಸ್ತಿ ಹಾನಿಯಾಗದಂತೆ ಅಗತ್ಯ ಕ್ರಮ ವಹಿಸಬೇಕು. ರಸ್ತೆ, ಸೇತುವೆಗಳು ಹಾನಿಯಾದಲ್ಲಿ, ಕೂಡಲೆ ರಸ್ತೆ ಸಂಪರ್ಕ ಪುನರ್‌ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ತುರ್ತು ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸಂಬಂಧಿಸಿದ ಇಲಾಖಾ ನೌಕರರು ಸನ್ನದ್ದರಾಗಿದ್ದು, ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಕಂದಾಯ, ಅರಣ್ಯ, ಬೆಸ್ಕಾಂ, ಲೋಕೋಪಯೋಗಿ, ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದರು.      

ಮನೆ ದುರಸ್ತಿ

ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಹಾಗೂ ಶಾಲೆಗಳಲ್ಲಿ ಮಳೆಯಿಂದಾಗಿ ಸೋರುತ್ತಿದ್ದರೆ, ಅದನ್ನು ದುರಸ್ಥಿಗೊಳಿಸಬೇಕು, ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ನೀರು ನುಗ್ಗಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಅಲ್ಲಿ ವಾಸಿಸುತ್ತಿರುವ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಮನವರಿಕೆ ಮಾಡಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಅನುಕೂಲ ಕಲ್ಪಿಸಿಕೊಡಬೇಕು. ಮಳೆಯಿಂದ ಮನೆಗಳಿಗೆ ಹಾನಿಯಾದಲ್ಲಿ ಕೂಡಲೇ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ವರದಿ ನೀಡಿ ಸಂತ್ರಸ್ತರಿಗೆ ಮಾರ್ಗಸೂಚಿಯ ಅನುಸಾರ ತ್ವರಿತವಾಗಿ ಪರಿಹಾರ ವಿತರಿಸಲು ಕ್ರಮವಹಿಸಬೇಕು.

ಗುಬ್ಬಿ ತಾಲ್ಲೂಕು ಹಂದಿಜೋಗಿ ಜನಾಂಗದವರು ವಾಸಿಸುವಂತಹ ಸ್ಥಳದಲ್ಲಿನ ಗುಡಿಸಲುಗಳಿಗೆ ಮಳೆ ನೀರು ನುಗ್ಗಿದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಅಧಿಕಾರಿಗಳು ಬೇಟಿ ನೀಡಿ, ಅಗತ್ಯ ಕ್ರಮಗಳ ಕೈಗೊಂಡು ವರದಿ ನೀಡಲು ಸೂಚಿಸಿದರು,  ಪ್ರವಾಹ ಉಂಟಾಗುವ ಸ್ಥಳಗಳ ಸಂತ್ರಸ್ಥರಿಗೆ ಸೂಕ್ತ ರಕ್ಷಣೆಗೆ ಕಾಳಜಿ/ಗಂಜಿ ಕೇಂದ್ರಗಳನ್ನು ತೆರೆಬೇಕಿದ್ದು, ಅಧಿಕಾರಿಗಳು ಸೂಕ್ತ ಸ್ಥಳಗಳನ್ನು ಗುರುತಿಸಿ ಕಾಳಜಿ/ಗಂಜಿ ಕೇಂದ್ರಗಳನ್ನು ತೆರೆಯುವಂತೆ ತಿಳಿಸಿದರು, ಜಿಲ್ಲಾ ಯೋಜನಾ ನಿರ್ದೇಶಕ ಅಂಜಿನಪ್ಪನವರಿಗೆ ಮಳೆಯಿಂದ ಮನೆಗಳಿಗೆ ಆಗಿರುವ ಹಾನಿಗಳ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದರು.

ಸಹಾಯವಾಣಿ

ಮಳೆಯಿಂದ ಸಂಭವಿಸುವ ಹಾನಿ ಹಾಗೂ ಪ್ರಾಕೃತಿಕ ವಿಕೋಪದ ಕುರಿತು ಮಾಹಿತಿ ಪಡೆಯಲು  ಜಿಲ್ಲಾ ಕೇಂದ್ರದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಸಂಬಂಧಿಸಿದವರು ತುಮಕೂರು ಜಿಲ್ಲೆ:0816-2213400, 7304975519, ಉಚಿತ ಸಹಾಯವಾಣಿ:155304  ಸಂರ್ಪಕಿಸಬಹುದಾಗಿದೆ

ವಿದ್ಯುತ್ ಅವಘಡಗಳು ಸಂಭವಿಸದಂತೆ ಕ್ರಮವಹಿಸಿ

ಮಧುಗಿರಿ ತಾಲ್ಲೂಕಿನಲ್ಲಿ 19 ವಿದ್ಯುತ್ ಕಂಬಗಳು, ಸಿರಾದಲ್ಲಿ 2, ಕೊರಟಗೆರೆಯಲ್ಲಿ 2 ಸೇರಿದಂತೆ ಜಿಲ್ಲೆಯಲ್ಲಿ ಮಳೆಯಿಂದಾಗಿ  ಉರುಳಿದ ಬಿದ್ದ ವಿದ್ಯುತ್ ಕಂಬಗಳ ಬಗ್ಗೆ ಮಾಹಿತಿ ಪಡೆದ ಅವರು  ಮಳೆಯಿಂದಾಗಿ ವಿದ್ಯುತ್ ಕಂಬಗಳು ಬೀಳುವ ಸಾಧ್ಯತೆಗಳಿದ್ದರೆ ಬೆಸ್ಕಾಂ ಅಧಿಕಾರಿಗಳು ಶಿಥಿಲಗೊಂಡಿರುವ ವಿದ್ಯುತ್ ಕಂಬಗಳನ್ನು ಪರಿಶೀಲಿಸಿ ಕೂಡಲೇ ತೆರವುಗೊಳಿಸಿ ವಿದ್ಯುತ್ ಅವಘಡಗಳು ಸಂಭವಿಸದಂತೆ ಕ್ರಮವಹಿಸಬೇಕು. ವಿದ್ಯುತ್ ತಂತಿಗಳಿಗೆ ಆವರಿಸಿಕೊಂಡಿರುವ ಅಪಾಯಕಾರಿ ಮರಗಳ ರೆಂಬೆಕೊಂಬೆಗಳನ್ನು ತೆರವುಗೊಳಿಸಿ,  ವ್ಯತ್ಯಯ,  ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಿ ವಿದ್ಯುತ್ ತಂತಿಯಿಂದ ಯಾವುದೇ ಜೀವ ಹಾನಿಯಾಗದಂತೆ ಎಚ್ಚರವಹಿಸುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿ

ಸಿರಾ ನಗರದ ವಾರ್ಡ್  ಸಂಖ್ಯೆ 21 ಮತ್ತು 25, ತಿಪಟೂರು ನಗರದ ಬಸ್ ನಿಲ್ದಾಣ, ರ‍್ಯೆಲ್ವೆ ಅಂಡರ್ ಪಾಸ್,  ತುರುವೇಕೆರೆ ನಗರದ ವಾರ್ಡ ಸಂಖ್ಯೆ 6  ಮೊದಲಾದ ಜಿಲ್ಲೆಯ ಅನೇಕ ಸ್ಥಳಗಳಲ್ಲಿ  ಮಳೆಯಿಂದ ಸಮಸ್ಯೆ ಉಂಟಾದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಚರಂಡಿಗಳನ್ನು ಸ್ವಚ್ಛಗೊಳಿಸಿರುವುದರ ಪರಿಶೀಲಿಸಿ ಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ರಸ್ತೆಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ರಾಷ್ಟ್ರೀಯ ಹಾಗೂ ರಾಜ್ಯ, ಜಿಲ್ಲಾ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಟಾಸ್ಕ್ ಪೋರ್ಸ ಸಭೆ

ಬರನಿರ್ವಹಣೆ ಮತ್ತು ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಪ್ರತಿ ತಾಲ್ಲೂಕು ಹಂತದಲ್ಲಿ ತಹಶೀಲ್ದಾರರು ಸಭೆಗಳನ್ನು ನಡೆಸಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ನೀಡುವಂತೆ ತಿಳಿಸಿದರು.

ಬಿತ್ತನೆ ಪ್ರದೇಶ

ಜಿಲ್ಲೆಯಲ್ಲಿ 3 ಲಕ್ಷದ 20 ಸಾವಿರ ಹೇಕ್ಟರ್ ಬಿತ್ತನೆ ಪ್ರದೇಶವಿದ್ದು,  ಪ್ರಸ್ತುದವರೆಗೂ 369 ಹೇಕ್ಟರ್ ವ್ಯಾಪ್ತಿಯಲ್ಲಿ ಬಿತ್ತನೆಯಾಗಿದ್ದು, ಇಂದಿನಿಂದ ರೈತರಿಗೆ ನೆಲಗಡಲೆ ಮತ್ತು ರಾಗಿ ಬಿತ್ತನೆ ಬೀಜಗಳ ವಿತರಿಸಲಾಗುತ್ತಿದ್ದು, ಎಲ್ಲಾ ಅಗತ್ಯ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಸಂಗ್ರಹವಿದ್ದು ಯಾವುದೇ  ಸಮಸ್ಯೆ ಕಂಡು ಬಂದಿರುವುದಿಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್ ಸಭೆಗೆ ಮಾಹಿತಿ ನೀಡಿದರು.

Lok Sabha Elections | ಲೋಕಸಭೆ ಚುನಾವಣೆ ಮತ ಎಣಿಕೆ ಏಜೆಂಟರ್ ಗಳು ಯಾರೆಲ್ಲಾ ಆಗಬಹುದು.?

ತುಮಕೂರು | ಲೋಕಸಭಾ ಕ್ಷೇತ್ರದ ಚುನಾವಣೆಗೆ (Lok Sabha Elections) ಸಂಬಂಧಿಸಿದಂತೆ ಜೂನ್ 4 ರಂದು ನಡೆಯಲಿರುವ ಮತ ಎಣಿಕಾ (Counting of votes) ಕಾರ್ಯಕ್ಕೆ ಎಣಿಕಾ ಏಜೆಂಟರನ್ನು ನೇಮಿಸಿ, ಜೂನ್ 1 ರೊಳಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ (Returning Officer) ಕಚೇರಿಗೆ ಮಾಹಿತಿ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ (District Collector Shub Kalyan) ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಮಾನ್ಯತೆ ಪಡೆದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸೋಮವಾರ ಸಭೆ ನಡೆಸಿ ಮಾತನಾಡಿದ ಅವರು ಜೂನ್ 4 ರಂದು ನಗರದ ವಿಶ್ವವಿದ್ಯಾನಿಲಯದ ವಿಜ್ಞಾನ  ಕಾಲೇಜು ಹಾಗೂ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆಗಾಗಿ 11 ಕೊಠಡಿಗಳಲ್ಲಿ 117 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ.  ಪ್ರತಿ ಎಣಿಕಾ ಟೇಬಲ್‌ಗೆ ಒಬ್ಬ ಮತ ಎಣಿಕಾ ಏಜೆಂಟರನ್ನು ನೇಮಿಸಲು ಅವಕಾಶವಿದ್ದು, ಅಭ್ಯರ್ಥಿಗಳು ತಮ್ಮ ಮತ ಎಣಿಕಾ ಏಜೆಂಟರನ್ನು ನೇಮಿಸಿ ಜೂನ್ 1 ರೊಳಗಾಗಿ ನಮೂನೆ 18 ರಲ್ಲಿ  ಮಾಹಿತಿ ಸಲ್ಲಿಸಬೇಕೆಂದರು.

ಭಾರತದ ನಾಗರಿಕನಾಗಿರುವ ಹಾಗೂ 18 ವರ್ಷ ಮೇಲ್ಪಟ್ಟ ಯಾವುದೇ ವ್ಯಕ್ತಿಯನ್ನು ಮತ ಎಣಿಕಾ ಏಜೆಂಟರನ್ನಾಗಿ ನೇಮಿಸಬಹುದಾಗಿದೆ.  ಆದರೆ ಕೇಂದ್ರ/ ರಾಜ್ಯ     ಸರ್ಕಾರದ ಯಾವುದೇ ಹಾಲಿ ಮಂತ್ರಿ/ಸಂಸತ್ ಸದಸ್ಯ ಅಥವಾ ವಿಧಾನಸಭೆ/ ವಿಧಾನ ಪರಿಷತ್ ಹಾಲಿ ಸದಸ್ಯ, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥ/ ನೇತಾರ/ ಅಧ್ಯಕ್ಷ ಅಥವಾ ಪಾಲಿಕೆ ಮೇಯರ್ ಅಥವಾ ನಗರಸಭೆ/ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಅಥವಾ ಯಾವುದೇ ಸರ್ಕಾರಿ ನೌಕರ ಅಥವಾ ಸರ್ಕಾರಿ ಸಂಸ್ಥೆಗಳ ಅಧ್ಯಕ್ಷರಾಗಿ ನೇಮಕಗೊಂಡ ರಾಜಕೀಯ ಪದಾಧಿಕಾರಿ/ಸರ್ಕಾರಿ ನ್ಯಾಯವಾದಿ/ಹೆಚ್ಚುವರಿ ಸರ್ಕಾರಿ ನ್ಯಾಯವಾದಿ ಅಥವಾ ರಾಷ್ಟ್ರೀಯ/ರಾಜ್ಯ/ಜಿಲ್ಲಾ ಸಹಕಾರ ಸಂಸ್ಥೆಗಳ ಚುನಾಯಿತ ಅಧ್ಯಕ್ಷರು ಅಥವಾ ಜಿಲ್ಲಾ ಪಂಚಾಯತಿ/ ಬ್ಲಾಕ್ ಮಟ್ಟದ ಪಂಚಾಯತಿ ಸಮಿತಿ ಅಧ್ಯಕ್ಷರಾಗಿಬಾರದು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮಾಹಿತಿ  ನೀಡಿದರು.

ಎಣಿಕಾ ಏಜೆಂಟರಾಗಿ ನೇಮಕ ಹೊಂದಿದವರು ಯಾವ ಏಣಿಕಾ ಟೇಬಲ್‌ಗೆ ನೇಮಕ ಮಾಡಲಾಗಿದೆಯೋ   ಅದೇ ಟೇಬಲ್‌ನಲ್ಲಿ ಎಣಿಕಾ ಕಾರ್ಯವನ್ನು ವೀಕ್ಷಿಸಬೇಕು. ಬೇರೆ ಟೇಬಲ್ ಅಥವಾ ಎಣಿಕಾ ಕೊಠಡಿಯಲ್ಲಿ ಕುಳಿತುಕೊಳ್ಳಲು ಅವಕಾಶವಿರುವುದಿಲ್ಲ. ಎಣಿಕಾ ಸಮಯದಲ್ಲಿ ಹೊರಗಡೆ/ಕೊಠಡಿಯ ಒಳಗೆ ಓಡಾಡಲು ಅವಕಾಶವಿರುವುದಿಲ್ಲ. ಎಣಿಕಾ ಕೇಂದ್ರಕ್ಕೆ  ಆಗಮಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಎಣಿಕಾ ಏಜೆಂಟರು ಜೂನ್ 4ರ ಬೆಳಿಗ್ಗೆ 6.30 ರೊಳಗಾಗಿ ಏಣಿಕಾ ಕೇಂದ್ರಗಳಲ್ಲಿ ಹಾಜರಿರಬೇಕೆಂದು ನಿರ್ದೇಶನ ನೀಡಿದರು.

ಮೊಬೈಲ್, ಇಂಕ್ ಪೆನ್, ಚಾಕು, ಬ್ಲೇಡ್, ಮತ್ತಿತರ  ಆಯುಧಗಳು, ಸ್ಮಾರ್ಟ್ ವಾಚ್, ಸ್ಮಾರ್ಟ್ ಪೆನ್, ನೀರಿನ ಬಾಟಲಿ, ಕಬ್ಬಿಣದ ವಸ್ತುಗಳು, ಬೆಂಕಿ, ಸಿಗರೇಟ್, ತಂಬಾಕು, ತಿಂಡಿ ಪದಾರ್ಥಗಳನ್ನು ಎಣಿಕಾ ಕೇಂದ್ರದೊಳಗೆ ತರಲು ಅವಕಾಶವಿರುವುದಿಲ್ಲ. ಮತ ಎಣಿಕೆ ಕಾರ್ಯದ ವೀಕ್ಷಣೆಗಾಗಿ ಬರುವ  ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಎಣಿಕಾ ಎಜೆಂಟರುಗಳಿಗಾಗಿ ಪ್ರತ್ಯೇಕ ಕೌಂಟರ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಈ ಕೌಂಟರ್‌ನಲ್ಲಿ ಹಣ ಪಾವತಿಸುವ ಮೂಲಕ ನಿಗದಿತ ಸಮಯದಲ್ಲಿ   ಉಪಹಾರ/ ಕಾಫಿ/ ಟೀ/ ಊಟವನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.

ಪೊಲೀಸ್ ಹಾಗೂ ಸಿಎಪಿಎಫ್ ಭದ್ರತೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳಿರುವ ಭದ್ರತಾ ಕೊಠಡಿಯನ್ನು   ಜೂನ್ 4ರ ಬೆಳಿಗ್ಗೆ 7:30ಕ್ಕೆ ತೆರೆಯಲಾಗುವುದು. ನಂತರ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆಯನ್ನು ಪ್ರಾರಂಭಿಸಲಾಗುವುದು.  ಮತ ಎಣಿಕೆಯನ್ನು ಗೊಂದಲವಿಲ್ಲದೆ ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಭದ್ರತಾ ಕೊಠಡಿಯಿಂದ ಮತ ಎಣಿಕಾ ಕೊಠಡಿಗೆ ವಿದ್ಯುನ್ಮಾನ ಮತ ಯಂತ್ರಗಳನ್ನು ತಂದು ಕೊಡಲು   ನಿಯೋಜಿಸಿರುವ ಸಿಬ್ಬಂದಿಗಳಿಗೆ  8 ವಿಧಾನಸಭಾ ಕ್ಷೇತ್ರಗಳಿಗೂ ಪ್ರತ್ಯೇಕ ಕಲರ್ ಕೋಡೆಡ್ ಟಿ-ಶರ್ಟ್ಗಳನ್ನು ನೀಡಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷದ ಪ್ರತಿನಿಧಿಗಳು,  ಚುನಾವಣಾ ತಹಶಿಲ್ದಾರ್ ರೇಷ್ಮಾ, ಚುನಾವಣಾ ಶಿರಸ್ತೆದಾರ್ ಮಂಜುನಾಥ್, ರವಿಕುಮಾರ್ ಸೇರಿದಂತೆ ಮತ್ತಿತರರು ಹಾಜರಿದ್ದರು.

Purchase of sowing seeds | ರೈತರು ಬಿತ್ತನೆ ಬೀಜ  ಖರೀದಿ ಮಾಡುವಾಗ ಎಚ್ಚರ..!

ಕೃಷಿ ಮಾಹಿತಿ | ರಾಜ್ಯದ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು (Rain), ರೈತರು ಬಿತ್ತನೆ ಕಾರ್ಯಾರಂಭ  ಮಾಡಿರುವ ಹಿನ್ನೆಲೆಯಲ್ಲಿ ಬಿತ್ತನೆ ಬೀಜವನ್ನು (Sow the seed) ಖರೀದಿಸುವಾಗ ಅಧಿಕೃತ ಮಾರಾಟಗಾರರಿಂದ (Authorized seller) ಮಾತ್ರ ಖರೀದಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ರಮೇಶ್ (Joint Director of Agriculture Ramesh) ಮನವಿ ಮಾಡಿದ್ದಾರೆ.

ಹೌದು,,, ಅನಾಮಧೇಯ ವ್ಯಕ್ತಿಗಳಿಂದ ರೈತರು ಬಿತ್ತನೆ ಬೀಜಗಳನ್ನು ಖರೀದಿ ಮಾಡಿ ಮೋಸ ಹೋಗುತ್ತಿರುವ ಪ್ರಕರಣಗಳು ಬೆಳಕಿಗೆಬರುತ್ತಿವೆ. ಹೀಗಾಗಿ ಬಿತ್ತನೆ ಬೀಜವನ್ನು ಖರೀದಿಸುವಾಗ ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿ ಮಾಡಬೇಕು ಎಂದು ತಿಳುವಳಿಕೆ ಹೇಳಿದ್ದಾರೆ.

ಖರೀದಿಸಿದ ಬಿತ್ತನೆ ಬೀಜಕ್ಕೆ ಕಡ್ಡಾಯವಾಗಿ ರಶೀದಿಯನ್ನು ಪಡೆಯಬೇಕು. ಯಾವುದೇ ಕಾರಣಕ್ಕೂ ಅನಾಮಧೇಯ ವ್ಯಕ್ತಿಗಳು ನೇರವಾಗಿ ಬಂದು ಲೂಸ್ ಪ್ಯಾಕೇಟ್‌ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ಖರೀದಿಸಬಾರದು ಎಂದು ತಿಳಿದ್ದಾರೆ.

Bangalore Rave Party | ಬೆಂಗಳೂರಿನ ರೇವ ಪಾರ್ಟಿಯಲ್ಲಿ ಸಿಕ್ಕಿಬಿದ್ದ ತೆಲುಗು ನಟಿಯರು..!

ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿ (Electronic City) ಬಳಿ ಜಿ.ಆರ್. ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ ಪಾರ್ಟಿ (Rave Party) ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದು, ತೆಲುಗು ನಟಿಯರು (Telugu actresses), ವಿಐಪಿಗಳು ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ.

ಬೆಳಗಿನ ಜಾವದಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಡ್ರಗ್ಸ್ ಪತ್ತೆಯಾಗಿದೆ. ಈ ವೇಳೆ ತೆಲುಗು ನಟಿಯರಿದ್ದರು ಎನ್ನಲಾಗಿದೆ. ರಾಜಕಾರಣಿಗಳ ನಂಟೂ ಪತ್ತೆಯಾಗಿದೆ. ಕಾನ್ ಕಾರ್ಡ್ ಮಾಲಿಕ ಗೋಪಾಲ ರೆಡ್ಡಿ ಅವರಿಗೆ ಸೇರಿದ ಫಾರ್ಮ್ ಹೌಸ್ ನಲ್ಲಿ ಹೈದರಾಬಾದ್ ಮೂಲದ ವ್ಯಕ್ತಿ ಪಾರ್ಟಿ ಆಯೋಜಿಸಿದ್ದ.

ಪಾರ್ಟಿಯಲ್ಲಿ ಎಂಡಿಎಂಎ ಮಾತ್ರೆ, ಕೊಕೇನ್ ಇತ್ಯಾದಿ ಪತ್ತೆಯಾಗಿದೆ. ಸುಮಾರು 100 ಜನ ಪಾರ್ಟಿಯಲ್ಲಿದ್ದರು ಎನ್ನಲಾಗಿದೆ. ಅವಧಿ ಪಾರ್ಟಿ ನಡೆಸುತ್ತಿದ್ದಾರೆ ಎಂಬ ಅನುಮಾನದ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಡ್ರಗ್ಸ್ ಕೂಡಾ ಪತ್ತೆಯಾಗಿದೆ.

ವಿಶೇಷವೆಂದರೆ ಈ ರೇವ್ ಪಾರ್ಟಿ ಹಿಂದೆ ಆಂಧ್ರ ಮೂಲದ ಶಾಸಕರೊಬ್ಬರ ನಂಟೂ ಪತ್ತೆಯಾಗಿದೆ. ಒಂದು ದಿನದ ಪಾರ್ಟಿಗೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಂಧ್ರದಿಂದ ನಟಿಮಣಿಯರನ್ನು ಕರೆಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಇದೀಗ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

HD Kumaraswamy’s appeal | ನನ್ನ ಮೇಲೆ ಗೌರವ ಇದ್ದರೆ ಪ್ರಜ್ವಲ್ ಎಲ್ಲಿದ್ದರು ಬಂದು ಶರಣಾಗು – ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು | ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ (case of sexual assault) ಸಿಲುಕಿಕೊಂಡಿರುವ ಹಾಸನ (Hassan) ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna) ಎಸ್ಐಟಿ ಮುಂದೆ ತನಿಖೆಗೆ ಹಾಜರಾಗುವಂತೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ (HD Kumaraswamy) ಮನವಿ ಮಾಡಿದ್ದಾರೆ.

ಇಂದು ಪತ್ರಿಕಾಗೋಷ್ಠಿ ನಡೆಸಿದ ಎಚ್ ಡಿ ಕುಮಾರಸ್ವಾಮಿ, ಪ್ರಜ್ವಲ್ ಎಲ್ಲೇ ಇದ್ದರೂ ಬಂದು ಎಸ್ಐಟಿ ಮುಂದೆ ತನಿಖೆ ಹಾಜರಾಗಬೇಕು ಎಂದಿದ್ದಾರೆ. ನನ್ನ, ಎಚ್ ಡಿ ದೇವೇಗೌಡರ ಮೇಲೆ ಸ್ವಲ್ಪವಾದರೂ ಗೌರವವಿದ್ದರೆ ತನಿಖೆಗೆ ಹಾಜರಾಗು ಎಂದು ಸಹೋದರನ ಪುತ್ರ ಪ್ರಜ್ವಲ್ ಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

‘ನನ್ನ ಮೇಲೆ, ದೇವೇಗೌಡರ ಮೇಲೆ ಕೊಂಚವಾದರೂ ಗೌರವವಿದ್ದರೆ ಕೈ ಮುಗಿದು ಮನವಿ ಮಾಡುತ್ತೇನೆ 24 ಇಲ್ಲಾ 48 ಗಂಟೆಯೊಳಗೆ ಬಂದು ಶರಣಾಗು ಈ ನೆಲದಲ್ಲಿ ಕಾನೂನು ಇರುವಾಗ ಭಯ ಯಾಕೆ..? ಕಳ್ಳ ಪೊಲೀಸ್ ಆಟ ಬಿಟ್ಟು ವಿದೇಶದಿಂದ ಬಂದು ತನಿಖೆಗೆ ಹಾಜರಾಗುವಂತೆ ಕುಮಾರಸ್ವಾಮಿ ಹೇಳಿದ್ದಾರೆ.

ನಾನು ಪದ್ಮನಾಭನಗರದ ನಿವಾಸಕ್ಕೆ ಪ್ರಜ್ವಲ್ ನನ್ನು ಬಿಡಿಸುವ ಬಗ್ಗೆ ಮಾತನಾಡಲು ಹೋಗಿಲ್ಲ. ಪ್ರಜ್ವಲ್ ಎಲ್ಲೇ ಇದ್ದರೂ ಬಂದು ಶರಣಾಗಲಿ ಎಂದು ತಂದೆಯವರಿಗೆ ಮನವಿ ಮಾಡಲು ಹೋಗಿದ್ದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.  ಈ ಪ್ರಕರಣ ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹೀಗಾಗಿ ನಾನು ಮತ್ತೊಮ್ಮೆ ಸಾರ್ವಜನಿಕವಾಗಿ ಕ್ಷಮೆ ಕೋರುತ್ತಿದ್ದೇನೆ. ಈ ಕೇಸ್ ನಲ್ಲಿ ನನ್ನ ಹಾಗೂ ದೇವೇಗೌಡರನ್ನು ಎಳೆದು ತಂದಿದ್ದಾರೆ ಎಂದು ಅವರು ಹೇಳಿದ್ದಾರೆ.

IPL 2024, RCB vs CSK Highlights | RCB ಹುಡುಗರ ಆಟಕ್ಕೆ ಮಂಕಾದ CSK ; ಪ್ಲೇಆಫ್ ತಲುಪಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು..!

ಕ್ರೀಡೆ | ಇಂಡಿಯನ್ ಪ್ರೀಮಿಯರ್ ಲೀಗ್ (IPL) 17 ನೇ ಸೀಸನ್ ನ 68ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು 27 ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಆರ್‌ಸಿಬಿ ಪ್ಲೇ ಆಫ್‌ (RCB play off) ಪ್ರವೇಶಿಸಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M. Chinnaswamy Stadium) ಶನಿವಾರ (ಮೇ 18) ನಡೆದ ಈ ಪಂದ್ಯದಲ್ಲಿ ಸಿಎಸ್‌ಕೆ ಗೆಲುವಿಗೆ 219 ರನ್ ಗಳಿಸಬೇಕಿತ್ತು, ಆದರೆ ಏಳು ವಿಕೆಟ್‌ಗೆ 191 ರನ್ ಗಳಿಸಲಷ್ಟೇ ಶಕ್ತವಾಯಿತು. ಸನ್‌ರೈಸರ್ಸ್ ಹೈದರಾಬಾದ್ (SRH), ಕೋಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ರಾಜಸ್ಥಾನ್ ರಾಯಲ್ಸ್ (RR) ಈಗಾಗಲೇ ಪ್ಲೇ ಆಫ್‌ಗೆ ಪ್ರವೇಶಿಸಿದ್ದವು.

IPL 2024 RCB Vs CSK | 18ರ ಲೆಕ್ಕ  ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವು ಪಕ್ಕ ..? – karnataka360.in

ಆರ್‌ಸಿಬಿ 219 ರನ್‌ಗಳ ಗುರಿ ನೀಡಿದ್ದರೂ, ಪ್ಲೇಆಫ್ ತಲುಪಲು ಸಿಎಸ್‌ಕೆ ಕೇವಲ 201 ರನ್ ಗಳಿಸಬೇಕಾಗಿತ್ತು. ಆದರೆ ಕೊನೆಯ ಓವರ್‌ನಲ್ಲಿ ಯಶ್ ದಯಾಳ್ ಅದ್ಭುತವಾಗಿ ಬೌಲಿಂಗ್ ಮಾಡಿ ಆರ್‌ಸಿಬಿ ಪ್ಲೇಆಫ್‌ಗೆ ಪ್ರವೇಶವನ್ನು ಖಚಿತಪಡಿಸಿದರು. ಯಶ್ ದಯಾಳ್ ಆ ಓವರ್‌ನಲ್ಲಿ ಎಂಎಸ್ ಧೋನಿಯನ್ನು ಔಟ್ ಮಾಡಿದರು ಮತ್ತು ಪ್ಲೇಆಫ್‌ಗೆ ತಲುಪಲು ಅಗತ್ಯವಾದ ರನ್‌ಗಳನ್ನು (17) ಗಳಿಸಲು ಸಿಎಸ್‌ಕೆಗೆ ಅವಕಾಶ ನೀಡಲಿಲ್ಲ.

CSK ಪರ ರಚಿನ್ ರವೀಂದ್ರ 37 ಎಸೆತಗಳಲ್ಲಿ 61 ರನ್ ಗಳಿಸಿ ಅತ್ಯಧಿಕ ಸ್ಕೋರ್ ಮಾಡಿದರು. ಈ ಅವಧಿಯಲ್ಲಿ ರವೀಂದ್ರ ಐದು ಬೌಂಡರಿ ಹಾಗೂ ಮೂರು ಸಿಕ್ಸರ್‌ಗಳನ್ನು ಬಾರಿಸಿದರು. ರವೀಂದ್ರ ಜಡೇಜಾ 22 ಎಸೆತಗಳಲ್ಲಿ 3 ಬೌಂಡರಿ ಹಾಗೂ 3 ಸಿಕ್ಸರ್ ಒಳಗೊಂಡ ಅಜೇಯ 42 ರನ್ ಗಳಿಸಿದರು. ಎಂಎಸ್ ಧೋನಿ 25 ರನ್ (13 ಎಸೆತ, 3 ಬೌಂಡರಿ ಹಾಗೂ 1 ಸಿಕ್ಸರ್) ಗಳಿಸಿ ಔಟಾದರು. ಆರ್‌ಸಿಬಿ ಪರ ಯಶ್ ದಯಾಳ್ ಗರಿಷ್ಠ ಎರಡು ವಿಕೆಟ್ ಪಡೆದರು.

ಯಶ್ ದಯಾಳ್ ಅವರ ಕೊನೆಯ ಓವರ್

ಮೊದಲ ಎಸೆತ- ಸಿಕ್ಸ್ ರನ್ (ಮಹೇಂದ್ರ ಸಿಂಗ್ ಧೋನಿ)

ಎರಡನೇ ಎಸೆತ-ವಿಕೆಟ್ (ಮಹೇಂದ್ರ ಸಿಂಗ್ ಧೋನಿ)

ಮೂರನೇ ಚೆಂಡು- 0 (ಶಾರ್ದೂಲ್ ಠಾಕೂರ್)

ನಾಲ್ಕನೇ ಎಸೆತ- 1 ರನ್ (ಶಾರ್ದೂಲ್ ಠಾಕೂರ್)

ಐದನೇ ಎಸೆತ- 0 ರನ್ (ರವೀಂದ್ರ ಜಡೇಜಾ)

ಆರನೇ ಎಸೆತ- 0 ರನ್ (ರವೀಂದ್ರ ಜಡೇಜಾ)

ಚೆನ್ನೈ ಸೂಪರ್ ಕಿಂಗ್ಸ್ ಇನಿಂಗ್ಸ್‌ನ ಸ್ಕೋರ್‌ ಕಾರ್ಡ್: (191/7, 20 ಓವರ್‌ಗಳು)

ಬ್ಯಾಟ್ಸ್‌ಮನ್                   ರನ್           ಬೌಲರ್                  ವಿಕೆಟ್ ಪತನ

ರುತುರಾಜ್ ಗಾಯಕ್ವಾಡ್     0        ಗ್ಲೆನ್ ಮ್ಯಾಕ್ಸ್‌ವೆಲ್              1-0

ಡ್ಯಾರಿಲ್ ಮಿಚೆಲ್              4        ಯಶ್ ದಯಾಳ್                  2-19

ಅಜಿಂಕ್ಯ ರಹಾನೆ               33       ಲಾಕಿ ಫರ್ಗುಸನ್                  3-85

ರಚಿನ್ ರವೀಂದ್ರ              61          ರನ್ ಔಟ್                         4-115

ಶಿವಂ ದುಬೆ                       7       ಕ್ಯಾಮೆರಾನ್ ಗ್ರೀನ್               5-119

ಮಿಚೆಲ್ ಸ್ಯಾಂಟ್ನರ್        3 ​​     ಮೊಹಮ್ಮದ್ ಸಿರಾಜ್              6-129

ಮಹೇಂದ್ರ ಸಿಂಗ್ ಧೋನಿ 25      ಯಶ್ ದಯಾಳ್                     7-190

ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳ ಸ್ಫೋಟಕ ಪ್ರದರ್ಶನ

ಇದಕ್ಕೂ ಮೊದಲು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತ್ತು. ನಾಯಕ ಫಾಫ್ ಡು ಪ್ಲೆಸಿಸ್ 39 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಸಿಕ್ಸರ್‌ಗಳ ಸಹಿತ 54 ರನ್ ಗಳಿಸಿದರು. ಮಾಜಿ ನಾಯಕ ವಿರಾಟ್ ಕೊಹ್ಲಿ 29 ಎಸೆತಗಳಲ್ಲಿ 47 ರನ್ ಗಳಿಸಿದರು. ಈ ಅವಧಿಯಲ್ಲಿ ಕೊಹ್ಲಿ ಮೂರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್‌ಗಳನ್ನು ಬಾರಿಸಿದರು. ಕೊಹ್ಲಿ ಮತ್ತು ಡು ಪ್ಲೆಸಿಸ್ ನಡುವೆ ಮೊದಲ ವಿಕೆಟ್‌ಗೆ 78 ರನ್‌ಗಳ ಜೊತೆಯಾಟವು ದೊಡ್ಡ ಸ್ಕೋರ್‌ಗೆ ಅಡಿಪಾಯ ಹಾಕಿತು. ಕೊಹ್ಲಿ-ಡು ಪ್ಲೆಸಿಸ್ ನಂತರ ಕ್ಯಾಮೆರಾನ್ ಗ್ರೀನ್ ಮತ್ತು ರಜತ್ ಪಾಟಿದಾರ್ ಮ್ಯಾಜಿಕ್ ಕಾಣಿಸಿಕೊಂಡಿದೆ.

ಕ್ಯಾಮರೂನ್ ಗ್ರೀನ್ ಔಟಾಗದೆ 38 ರನ್ ಗಳಿಸಿದರು. ಈ ವೇಳೆ 18 ಎಸೆತಗಳನ್ನು ಎದುರಿಸಿದ ಅವರು ಮೂರು ಸಿಕ್ಸರ್‌ಗಳ ಹೊರತಾಗಿ 3 ಬೌಂಡರಿಗಳನ್ನು ಬಾರಿಸಿದರು. ಆದರೆ ಪಾಟಿದಾರ್ 23 ಎಸೆತಗಳಲ್ಲಿ ನಾಲ್ಕು ಸಿಕ್ಸರ್ ಮತ್ತು 2 ಬೌಂಡರಿಗಳ ಸಹಾಯದಿಂದ 41 ರನ್ ಗಳಿಸಿದರು. ದಿನೇಶ್ ಕಾರ್ತಿಕ್ (14) ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ (16) ಕೂಡ ಕೊನೆಯ ಓವರ್ ಗಳಲ್ಲಿ ಬಿರುಸಿನ ಬ್ಯಾಟಿಂಗ್ ನಡೆಸಿದರು. CSK ಪರ ಶಾರ್ದೂಲ್ ಠಾಕೂರ್ ಗರಿಷ್ಠ ಎರಡು ವಿಕೆಟ್ ಪಡೆದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್ ಸ್ಕೋರ್ ಕಾರ್ಡ್: (218/5, 20 ಓವರ್)

ಬ್ಯಾಟ್ಸ್‌ಮನ್                       ರನ್                    ಬೌಲರ್                     ವಿಕೆಟ್ ಪತನ

ವಿರಾಟ್ ಕೊಹ್ಲಿ                     47                ಮಿಚೆಲ್ ಸ್ಯಾಂಟ್ನರ್                   1-78

ಫಾಫ್ ಡು ಪ್ಲೆಸಿಸ್                 54                      ರನ್ ಔಟ್                             2-113

ರಜತ್ ಪಾಟಿದಾರ್               41               ಶಾರ್ದೂಲ್ ಠಾಕೂರ್                    3-184

ದಿನೇಶ್ ಕಾರ್ತಿಕ್           14                     ತುಷಾರ್ ದೇಶಪಾಂಡೆ                   4-201

ಗ್ಲೆನ್ ಮ್ಯಾಕ್ಸ್‌ವೆಲ್         16                   ಶಾರ್ದೂಲ್ ಠಾಕೂರ್                     5-218

ಈ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿದ್ದರಿಂದ ಕೆಲಕಾಲ ಆಟ ಸ್ಥಗಿತಗೊಂಡಿತು. ಪಂದ್ಯ ನಡೆಯದೇ ಇದ್ದಿದ್ದರೆ ಚೆನ್ನೈ ಸೂಪರ್ ಕಿಂಗ್ಸ್ 15 ಅಂಕಗಳೊಂದಿಗೆ ಪ್ಲೇ ಆಫ್ ತಲುಪುತ್ತಿತ್ತು. ಆದರೆ RCB ಪ್ಲೇಆಫ್ ತಲುಪಲು ಕನಿಷ್ಠ 18 ರನ್‌ಗಳಿಂದ ಗೆಲ್ಲಬೇಕಾಗಿತ್ತು.

ಈ ಪಂದ್ಯಕ್ಕಾಗಿ ಉಭಯ ತಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿದ್ದವು. CSK ಕಿವೀಸ್ ಆಲ್ ರೌಂಡರ್ ಮಿಚೆಲ್ ಸ್ಯಾಂಟ್ನರ್ ಅವರನ್ನು ತಂಡದಲ್ಲಿ ಸೇರಿಸಿಕೊಂಡಿತ್ತು. ಸ್ವದೇಶಕ್ಕೆ ಮರಳಿದ ಮೊಯಿನ್ ಅಲಿ ಬದಲಿಗೆ ಸ್ಯಾಂಟ್ನರ್ ಬಂದಿದ್ದರು. RCB ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಪ್ಲೇಯಿಂಗ್-11 ರಲ್ಲಿ ಸೇರಿಸಿಕೊಂಡಿತ್ತು ಏಕೆಂದರೆ ಇಂಗ್ಲೆಂಡ್ ಆಲ್‌ರೌಂಡರ್ ವಿಲ್ ಜಾಕ್ವೆಸ್ ತವರಿಗೆ ಮರಳಿದ್ದರು.

ನೋಡಿದರೆ ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಇದುವರೆಗೆ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ 33 ಪಂದ್ಯಗಳು ನಡೆದಿವೆ. ಈ ಅವಧಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 21 ಪಂದ್ಯಗಳನ್ನು ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಕೂಡ ಅನಿರ್ದಿಷ್ಟವಾಗಿ ಉಳಿಯಿತು. ಈ ಮೈದಾನದಲ್ಲಿ ಆರ್‌ಸಿಬಿ ವಿರುದ್ಧ ಸಿಎಸ್‌ಕೆ ಕೇವಲ ಎರಡು ಪಂದ್ಯಗಳಲ್ಲಿ ಸೋತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ

ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ಮಹಿಪಾಲ್ ಲೊಮೊರೊರ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಯಶ್ ದಯಾಲ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.

ಚೆನ್ನೈ ಸೂಪರ್ ಕಿಂಗ್ಸ್‌ ತಂಡ

ರಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್ (ನಾಯಕ), ಡೇರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (ವಿಕೆಟ್ ಕೀಪರ್), ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮರ್ಜೀತ್ ಸಿಂಗ್, ಮಹಿಷ್ ಟಿಕ್ಶಿನಾ.

Tumkur New transport facility | ಎಸ್ ಮಾಲ್ ಬಳಿ ಸೇತುವೆ ನಿರ್ಮಾಣ ಕಾಮಗಾರಿ : ಶಿರಾಗೇಟ್‌ನಿಂದ ತುಮಕೂರು ನಗರ ನಿಲ್ದಾಣಕ್ಕೆ ನೂತನ ಬಸ್ ವ್ಯವಸ್ಥೆ

ತುಮಕೂರು |  ನಗರದ (Tumkur) ಎಸ್ ಮಾಲ್ (S Mall) ಬಳಿ ಸೇತುವೆ ನಿರ್ಮಾಣ (Bridge construction) ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿರಾಗೇಟ್‌ನಿಂದ ನಗರ ಬಸ್ ನಿಲ್ದಾಣಕ್ಕೆ ನೂತನ ಸಾರಿಗೆ ಸೌಲಭ್ಯ (New transport facility) ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.

ನೂತನ ಸಾರಿಗೆ ಬಸ್ ಕಾರ್ಯಾಚರಣೆಯು ಇಂದಿನಿಂದ ಪ್ರಾರಂಭವಾಗಿದ್ದು, ಪ್ರತಿ ದಿನ ಬೆಳಿಗ್ಗೆ 7 ರಿಂದ  ಸಂಜೆ 7 ಗಂಟೆಯವರೆಗೆ ತುಮಕೂರು ಬಸ್ ನಿಲ್ದಾಣ-ಸಿರಾಗೇಟ್-ತುಮಕೂರು ಬಸ್ ನಿಲ್ದಾಣಕ್ಕೆ ಸತ್ಯಮಂಗಲ, ಹನುಮಂತಪುರ, ಕೋತಿತೋಪು ಮಾರ್ಗವಾಗಿ ಪ್ರತಿ 20 ನಿಮಿಷಕ್ಕೊಂದರಂತೆ ಸಂಚರಿಸಲಿದೆ.

ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ನೂತನ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದ್ದು, 10 ರೂ.ಗಳ ಪ್ರಯಾಣ ದರ ನಿಗಧಿ ಪಡಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ನೂತನ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

Tumkur Bridge construction | ಎಸ್ ಮಾಲ್ ಬಳಿ ನಿರ್ಮಿಸುತ್ತಿರುವ ಸೇತುವೆ ಹಾಗೂ ವರ್ತುಲ ರಸ್ತೆ ನಿರ್ಮಾಣ ಕಾಮಗಾರಿ ಪರಿಶೀಲನೆ

ತುಮಕೂರು | ನಗರದಲ್ಲಿ (Tumkur) ಧಾರಾಕಾರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಬಿ. ಕರಾಳೆ (Shivananda) ಅವರು ಶನಿವಾರ ಎಸ್ ಮಾಲ್ (S Mall) ಬಳಿ ನಿರ್ಮಿಸುತ್ತಿರುವ ಸೇತುವೆ ಹಾಗೂ ವರ್ತುಲ ರಸ್ತೆ ನಿರ್ಮಾಣ ಕಾಮಗಾರಿಗಳ (Bridge construction work) ಪ್ರಗತಿ ಪರಿಶೀಲನೆ ನಡೆಸಿದರು.

ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಮಳೆ ನಿಂತ ಕೂಡಲೇ ಎಸ್ ಮಾಲ್ ಬಳಿ ತುಮಕೂರು ನಗರದಿಂದ ಶಿರಾಗೇಟ್ ಕಡೆಗೆ ಲಘು ವಾಹನಗಳು ಸಂಚರಿಸಲು ಅನುವಾಗುವಂತೆ  ಪರ್ಯಾಯವಾಗಿ ಏಕಮುಖ ರಸ್ತೆ (ತಾತ್ಕಾಲಿಕ) ನಿರ್ಮಾಣ ಮಾಡಬೇಕೆಂದು ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎನ್.ಕೆ.ರವಿ ಅವರಿಗೆ ಸೂಚನೆ ನೀಡಿದರು.

ವರ್ತುಲ ರಸ್ತೆಯಲ್ಲಿ ಮಳೆ ನೀರು ಸರಾಗವಾಗಿ ಹರಿಯದೆ ನಿಂತಿರುವುದರಿಂದ ವಾಹನಗಳು ಸಂಚರಿಸಲು ಸಾಧ್ಯವಿಲ್ಲದಂತಾಗಿದೆ. ಇಲ್ಲಿಯೂ ಸಹ ಮಳೆ ಬಿಡುವು ಕೊಟ್ಟ ಕೂಡಲೇ ಮಳೆನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡುವುದರೊಂದಿಗೆ ವರ್ತುಲ ರಸ್ತೆ ಕಾಮಗಾರಿ ಹಾಗೂ ವರ್ತುಲ ರಸ್ತೆಯಲ್ಲಿ ಪ್ರಗತಿಯಲ್ಲಿರುವ ಸೇತುವೆ ನಿರ್ಮಾಣ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ನಿರ್ದೇಶನ ನೀಡಿದರು.