ಉತ್ತರ ಪ್ರದೇಶ | ಉತ್ತರ ಪ್ರದೇಶದಲ್ಲಿ ನಿರ್ಗತಿಕ ಮಕ್ಕಳಿಗಾಗಿ ಸುಮಾರು 1,115 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ 16 ವಸತಿ ಶಾಲೆಗಳನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದ್ದಾರೆ.
ಈ ಶಾಲೆಗಳು – ಅಟಲ್ ಅವಾಸಿಯಾ ವಿದ್ಯಾಲಯಗಳು – ಕಾರ್ಮಿಕರು ಮತ್ತು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮತ್ತು ಕೋವಿಡ್-19 ಸಾಂಕ್ರಾಮಿಕ ರೋಗದಲ್ಲಿ ಅನಾಥರಾದವರಿಗೆ ಗುಣಮಟ್ಟದ ಶಿಕ್ಷಣವನ್ನು ಒದಗಿಸಲು ತೆರೆಯಲಾಗಿದೆ. ಈ ಶಾಲೆಗಳನ್ನು ರಾಷ್ಟ್ರಕ್ಕೆ ಅರ್ಪಿಸುವ ಮುನ್ನ ಪ್ರಧಾನಿ ಮೋದಿ ಅವರು ಕೆಲವು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
ಸುಮಾರು 1,115 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ವಸತಿ ಶಾಲೆಗಳು ತಲಾ 1,000 ವಿದ್ಯಾರ್ಥಿಗಳಿಗೆ ವಸತಿ ಕಲ್ಪಿಸುವ ಉದ್ದೇಶ ಹೊಂದಿವೆ. ಇವುಗಳು ಗುಣಮಟ್ಟದ ಶಿಕ್ಷಣದ ಪ್ರವೇಶವನ್ನು ಹೆಚ್ಚಿಸುತ್ತವೆ ಮತ್ತು ಮಕ್ಕಳ ಸಮಗ್ರ ಬೆಳವಣಿಗೆಗೆ ಸಹಾಯ ಮಾಡುತ್ತವೆ.
ಪ್ರತಿಯೊಂದು ಶಾಲೆಗಳು 10-15 ಎಕರೆ ವಿಸ್ತೀರ್ಣದಲ್ಲಿ ತರಗತಿ ಕೊಠಡಿಗಳು, ಆಟದ ಮೈದಾನ, ಮನರಂಜನಾ ಪ್ರದೇಶಗಳು, ಮಿನಿ ಸಭಾಂಗಣ, ಹಾಸ್ಟೆಲ್ ಸಂಕೀರ್ಣ, ಮೆಸ್ ಮತ್ತು ಸಿಬ್ಬಂದಿಗೆ ವಸತಿ ಕ್ವಾರ್ಟರ್ಸ್ಗಳೊಂದಿಗೆ ನಿರ್ಮಿಸಲಾಗಿದೆ.