Priyangu Pandey | ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ಮಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು | ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಪ್ರಿಯಾಂಗು ಪಾಂಡೆ (Priyangu Pandey) ಮೇಲೆ ನಡೆದಿದ್ದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರದಲ್ಲಿ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಬಂಧಿತ ಆರೋಪಿ ಮೋಹಿತ್ ಮಹತೋ ಅಲಿಯಾಸ್ ಸಾಹಿಲ್, ಈತನ ಬಳಿ ಇದ್ದ ಮೊಬೈಲ್‌ ಹಾಗೂ ಹಲವು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನು ಓದಿ : Kamal Haasan Controversial Statement | ಕಮಲ್ ಹಾಸನ್ ಹೇಳಿಕೆಗೆ ಶಿವರಾಜ್ ಕುಮಾರ್ ಪ್ರತಿಕ್ರಿಯೆ

ಈ ಪ್ರಕರಣದಲ್ಲಿ ಈಗಾಗಲೇ ಒಟ್ಟು 17 ಮಂದಿ ಬಂಧಿತರಾಗಿದ್ದು, ಸ್ಥಳೀಯ ಪೊಲೀಸ್ ಅಧಿಕಾರಿಗಳು 12 ಜನರನ್ನು ಹಾಗೂ ಎನ್‌ಐಎ ಅಧಿಕಾರಿಗಳು ಈವರೆಗೆ 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಮಾಜಿ ಸಂಸದ ಪ್ರಿಯಾಂಗು ಪಾಂಡೆ (Priyangu Pandey) ಮೇಲೆ ಗುಂಡಿನ ದಾಳಿ

2024ರ ಆಗಸ್ಟ್ 28ರಂದು, ಮಾಜಿ ಸಂಸದ ಅರ್ಜುನ್ ಸಿಂಗ್ ಅವರ ಮನೆಗೆ ಹೋಗುವ ಮಾರ್ಗದಲ್ಲಿ, ಭಾತ್ಪಾರಾ ಬಳಿ ಪ್ರಿಯಾಂಗು ಪಾಂಡೆ ಅವರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿದ್ದರು. ಈ ಘಟನೆಯಲ್ಲಿ ಪಾಂಡೆ ಮತ್ತು ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು.

ಪ್ರಕರಣದ ತನಿಖೆ ಆರಂಭಿಸಿದ ಸ್ಥಳೀಯ ಪೊಲೀಸ್ ಇಲಾಖೆ ಪ್ರಾಥಮಿಕವಾಗಿ 12 ಆರೋಪಿಗಳನ್ನು ಬಂಧಿಸಿದ್ದು, ಬಳಿಕ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸಲಾಯಿತು. ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯ ವಲಯದಲ್ಲಿ ನಡುಗುಂಟು ಉಂಟಾಗಿದ್ದು, ಇದು ರಾಷ್ಟ್ರೀಯ ಮಟ್ಟದಲ್ಲಿಯೂ ಚರ್ಚೆಗೆ ಗ್ರಾಸವಾಗಿದೆ.

Leave a Reply

Your email address will not be published. Required fields are marked *