ಬೆಂಗಳೂರು | ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (PUC Exam Result) ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (Karnataka School Examination and Valuation Board) ಸುದ್ದಿಗೋಷ್ಠಿ ನಡೆಸುವ ಮೂಲಕ ಫಲಿತಾಂಶ ಘೋಷಣೆ ಮಾಡಿದ್ದು, ಶೇ.81.15 ವಿದ್ಯಾರ್ಥಿಗಳು (Students) ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳು karresults.nic.in ಫಲಿತಾಂಶವನ್ನು ಪರಿಶೀಲಿಸಬಹುದು. ಮಾ.1ರಿಂದ ಮಾ.22ರವರೆಗೆ ನಡೆದಿದ್ದ ಪರೀಕ್ಷೆಗೆ 6.9 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು.
ವಿಭಾಗವಾರು ಪಿಯುಸಿ ಫಲಿತಾಂಶ
* ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
*ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
* 1,74,315 ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ದ್ವಿತೀಯ ಪಿಯುಸಿ ರಿಸಲ್ಟ್: ರಾಜ್ಯಕ್ಕೆ ಇವರೇ ಟಾಪರ್ಸ್
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ರಾಜ್ಯಕ್ಕೆ ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮಿ ಪ್ರಥಮ ಸ್ಥಾನ ಪಡೆದಿದ್ದಾರೆ. ಅವರು ಒಟ್ಟು 598/600 ಅಂಕ ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಕಲಾ ವಿಭಾಗದಲ್ಲಿ ಬೆಂಗಳೂರಿನ ಮೇಧಾ ಡಿ. 596/100, ವಿಜಯಪುರದ ವೇದಾಂತ್ 596/100, ವಿಜಯನಗರದ ಕವಿತಾ 596/100 ಅಂಕ ಪಡೆದಿದ್ದಾರೆ. ಇನ್ನು ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ 597/600 ಅಂಕ ಪಡೆದು ಟಾಪರ್ ಆಗಿದ್ದಾರೆ.
PUC ಫಲಿತಾಂಶ: ಈ ಜಿಲ್ಲೆ ಪ್ರಥಮ
ದಕ್ಷಿಣ ಕನ್ನಡ: ಪ್ರಥಮ ಸ್ಥಾನ (ಶೇ.97)
ಉಡುಪಿ: 2ನೇ ಸ್ಥಾನ (96)
ವಿಜಯಪುರ: 3ನೇ ಸ್ಥಾನ (94)
ಉತ್ತರ ಕನ್ನಡ: 4ನೇ ಸ್ಥಾನ (92)
ಕೊಡಗು: 5ನೇ ಸ್ಥಾನ (92)
ಬೆಂಗಳೂರು ದಕ್ಷಿಣ: 6ನೇ ಸ್ಥಾನ (89)
ಹಾಸನ: 7ನೇ ಸ್ಥಾನ (85)
ಚಾಮರಾಜನಗರ: 8ನೇ ಸ್ಥಾನ (84)
ಗದಗ ಜಿಲ್ಲೆ: ಕೊನೆ ಸ್ಥಾನ
ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಇವರೇ ಫಸ್ಟ್
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ವಿಜ್ಞಾನ ವಿಭಾಗದಲ್ಲಿ ಹುಬ್ಬಳ್ಳಿಯ ವಿದ್ಯಾಲಕ್ಷ್ಮೀ ಪ್ರಥಮ ಸ್ಥಾನ ಪಡೆದಿದ್ದಾರೆ. ವಿದ್ಯಾಲಕ್ಷ್ಮೀ ಅವರು 600 ಕ್ಕೆ598 ಅಂಕ ಪಡೆದಿದ್ದಾರೆ. ಕಲಾ ವಿಭಾಗದಲ್ಲಿ ಬೆಂಗಳೂರಿನ ಮೇಧಾ ಡಿ (596), ವಿಜಯಪುರ ವೇದಾಂತ್ (596) ಹಾಗೂ ವಿಜಯನಗರ ಜಿಲ್ಲೆಯ ಕೊಟ್ಟೂರಿನ ಬಿ.ವಿ.ಕವಿತಾ (596) ಮೊದಲ ಸ್ಥಾನ ಪಡೆದಿದ್ದಾರೆ. ಹಾಗೆಯೇ, ವಾಣಿಜ್ಯ ವಿಭಾಗದಲ್ಲಿ ತುಮಕೂರಿನ ಜ್ಞಾನವಿ ಅವರು 597 ಅಂಕಗಳೊಂದಿಗೆ ಅಗ್ರ ಸ್ಥಾನ ಪಡೆದಿದ್ದಾರೆ.
ವಾಣಿಜ್ಯ ಟಾಪರ್ ಜ್ಞಾನವಿ ಹೇಳಿದ್ದೇನು..?
ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಜ್ಞಾನವಿ ಮೊದಲ ಸ್ಥಾನ ಪಡೆದಿದ್ದಾರೆ. ಫಲಿತಾಂಶದ ಕುರಿತು ಮೊದಲ ಪ್ರತಿಕ್ರಿಯೆ ನೀಡಿರುವ ಅವರು, ಮೊದಲ ಸ್ಥಾನ ಪಡೆದಿರುವುದು ತುಂಬಾ ಖುಷಿಯಾಗುತ್ತಿದೆ. ನಾನು ಹಾಸ್ಟೆಲ್‌ನಲ್ಲಿ ಇದ್ದೆ. ನಾನೂ ಮೊಬೈಲ್ ಬಳಕೆ ಮಾಡುತ್ತಿರಲಿಲ್ಲ. ಸೋಶಿಯಲ್ ಮೀಡಿಯಾ ಬಳಕೆ ಮಾಡುತ್ತಿರಲಿಲ್ಲ. ಓದಿನ ನನ್ನದೇ ಆದ ವೇಳಾಪಟ್ಟಿಯನ್ನು ಮಾಡಿಕೊಂಡಿದ್ದೆ. ಅವತ್ತಿನ ಅಧ್ಯಾಯವನ್ನು ಅವತ್ತೇ ಮಾಡುತ್ತಿದ್ದೆ. ಮುಂದೆ ಸಿಎ ಮಾಡುವ ಆಸೆಯಿದೆ ಎಂದು ಹೇಳಿದ್ದಾರೆ.