ಬೆಂಗಳೂರು | ಕಳೆದ ಕೆಲವು ತಿಂಗಳುಗಳ ಹಿಂದೆ ಕೇಂದ್ರದ ಬಿಜೆಪಿ ನಾಯಕರು (BJP leaders) ಮಾಜಿ ಸಿಎಂ ಮತ್ತು ಹಾಲಿ ಸಂಸದ ಡಿ ವಿ ಸದಾನಂದಗೌಡರಿಗೆ (DV Sadananda Gowda) ಮುಂಬರುವ ಲೋಕಸಭೆ ಚುನಾವಣಾ (Lok Sabha Elections) ಕಣದಿಂದ ಹಿಂದೆ ಸರಿಯುವಂತೆ ಸೂಚನೆ ನೀಡಿದ್ದರು. ಈ ವಿಚಾರವನ್ನು ಭಾವುಕರಾಗಿ ಪರೋಕ್ಷವಾಗಿ ಮಾಧ್ಯಮಗಳಿಗೆ ತಿಳಿಸಿದ್ದರು ಡಿವಿ ಸದಾನಂದ ಗೌಡ.
Basavaraja Bommai | ಕೊನೆಗೂ ಬಿ ಸಿ ಪಾಟೀಲ್ ಭೇಟಿ ಮಾಡಿದ ಬಸವರಾಜ ಬೊಮ್ಮಾಯಿ..! – karnataka360.in
ಇಷ್ಟೆಲ್ಲ ಆದರೂ ಕೂಡ ಮತ್ತೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ವ್ಯಕ್ತಪಡಿ ಸುತ್ತಲೇ ಬಂದಿದ್ದರು. ಆದರೆ ಇದೀಗ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ (Bangalore North Lok Sabha Constituency) ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ. ಇದಕ್ಕೆ ಸ್ಥಳೀಯ ಬಿಜೆಪಿ ಕಾರ್ಯಕರ್ತರು, ಮುಖಂಡರು ಕೂಡ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ.
ಇದರ ಬೆನ್ನಲ್ಲಿ ಡಿ ವಿ ಸದಾನಂದ ಗೌಡ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ (Joined the Congress Party) ಎಂಬ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಸ್ಪಷ್ಟ ಉದಾಹರಣೆ ಎಂದರೆ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಯೋಜನೆಗಳು ಮತ್ತು ಪಕ್ಷದಲ್ಲಿ ಹಿರಿಯರನ್ನು ನಡೆಸಿಕೊಳ್ಳುವ ರೀತಿ ಎಲ್ಲವನ್ನು ಕೂಡ ಸದಾನಂದ ಗೌಡರು ಮೆಚ್ಚಿದ್ದರು.
ಈ ಕುರಿತಂತೆ ಡಿವಿಎಸ್ ತಮ್ಮ ನಿರ್ಧಾರವನ್ನು ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವ ಮೂಲಕ ಪ್ರಕಟಿಸಲಿದ್ದಾರೆ, ಕಾಂಗ್ರೆಸ್ ಸೇರ್ಪಡೆ ಕುರಿತು ತಮ್ಮ ನಿಲುವು ತಿಳಿಸಲಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಹಲವು ಕಾಂಗ್ರೆಸ್ ನಾಯಕರು ಸದಾನಂದ ಗೌಡ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.