ಉತ್ತರಪ್ರದೇಶ | ರಾಜ್ಯದ ಬುಲಂದ್‌ಶಹರ್ ಪೊಲೀಸರು 2 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಶೂಟ್ (Shoot the rapist) ಮಾಡಿ ಬಂಧಿಸಿದ್ದಾರೆ. ಆರೋಪಿ ಪೊಲೀಸರ ಕಾರ್ಯಚರಣೆಯಲ್ಲಿ ಗುಂಡು ತಗುಲಿ ಗಾಯಗೊಂಡಿದ್ದನು. ಇದೀಗ ಆರೋಪಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿ ವಿಕಾಸ್ ಪ್ರತಾಪ್ ಸಿಂಗ್ ಚೌಹಾಣ್ ಅವರು ಶನಿವಾರ ಮತ್ತು ಭಾನುವಾರದ ಮಧ್ಯರಾತ್ರಿಯಲ್ಲಿ, ಕಪ್ಪು ಬೈಕ್ ಅನ್ನು ನೋಡಿದ್ದು ವಾಡಿಕೆಯಂತೆ ತನಿಖೆ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಬೈಕ್ ಸವಾರ ಓಡಿ ಹೋಗಲು ಪ್ರಯತ್ನ ಪಟ್ಟಿದ್ದಾನೆ. ಇದಾದ ಬಳಿಕ ಪೊಲೀಸರು ಬೈಕ್ ಬೆನ್ನಟ್ಟಿದ್ದಾರೆ.
ಈ ಸಮಯದಲ್ಲಿ ಅವನನ್ನು ಸೇತುವೆಯ ಮೇಲೆ ತಡೆದಿದ್ದಾರೆ. ಆದರೆ, ಪೊಲೀಸರು ಆತನನ್ನು ಬಂಧಿಸಲು ಮುಂದಾದಾಗ ಆತ ಪೊಲೀಸರತ್ತ ಗುಂಡು ಹಾರಿಸಿದ್ದಾನೆ. ನಂತರ ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದು, ಆರೋಪಿ ಗಾಯಗೊಂಡಿದ್ದಾನೆ. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದು, ಆರೋಪಿಯನ್ನು ಹರಿಯಾಣದ ಪಲ್ವಾಲ್ ಜಿಲ್ಲೆಯ ಕಲ್ಲು ಎಂದು ಗುರುತಿಸಲಾಗಿದೆ.
ತನಿಖೆಯ ವೇಳೆ ಶನಿವಾರ ತನ್ನ ಕುಟುಂಬದ 2 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವುದು ಪೊಲೀಸರಿಗೆ ತಿಳಿದು ಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ತನಿಖೆಯಲ್ಲಿ ಏನೆಲ್ಲಾ ಸತ್ಯಾಂಶ ಹೊರಬಿದ್ದರೂ ಅದರ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.