ತುಮಕೂರು | ಬೆಂಗಳೂರು ಗ್ರಾಮಾಂತರ ಲೋಕಸಭಾ (Bangalore Rural Lok Sabha) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್ (Dr. Manjunath) ಅವರು ಇಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ (Siddaganga Math) ಭೇಟಿ ನೀಡಿ ತ್ರಿವಿಧ ದಾಸೋಹಿ ಡಾ. ಶ್ರೀ ಶ್ರೀ ಶಿವಕುಮಾರ ಶ್ರೀಗಳ (Shivkumar Srigalu) 117ನೇ ಜಯಂತೋತ್ಸವದಲ್ಲಿ ಭಾಗವಹಿಸಿ, ಗದ್ದುಗೆ ಪೂಜೆ ನೆರವೇರಿಸಿ ಶ್ರೀಗಳ ಆಶೀರ್ವಾದವನ್ನು ಪಡೆದರು.
ಈ ವೇಳೆ ತಮ್ಮ ಕ್ಷೇತ್ರದ ಚುನಾವಣೆಯ ಚಟುವಟಿಕೆಗಳ ಬಗ್ಗೆ ಮಾತನಾಡಿದ ಅವರು ಚನ್ನಪಟ್ಟಣದಲ್ಲಿ ಅದ್ದೂರಿ ಕಾರ್ಯಕ್ರಮವನ್ನು ನಾಳೆ ಆಯೋಜನೆ ಮಾಡಲಾಗುತ್ತಿದ್ದು, ಈ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮಿಸಲಿದ್ದಾರೆ ಎಂದರು.
ಇನ್ನು ಏಪ್ರಿಲ್ 4 ಗುರುವಾರ ನಾಮಪತ್ರ ಸಲ್ಲಿಕೆ ಮಾಡಲಾಗುತ್ತಿದ್ದು ಬಿಜೆಪಿ, ಜೆಡಿಎಸ್ ಮುಖಂಡರು, ಅಭಿಮಾನಿಗಳು, ಹಿತೈಷಿಗಳು ಮತ್ತು ಬೆಂಬಲಿಗರೊಡನೆ ರ್ಯಾಲಿಯ ಮೂಲಕ ನಾಮಪತ್ರ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ಇನ್ನು ಬೆಂಗಳೂರು ಗ್ರಾಮಾಂತರದ ಕುಕ್ಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈಗಾಗಲೇ ಎಫ್ ಐ ಆರ್ ದಾಖಲಾಗಿದೆ. ಇದರ ಬಗ್ಗೆ ಚುನಾವಣಾ ಆಯೋಗ ಕ್ರಮ ತೆಗೆದುಕೊಳ್ಳುತ್ತದೆ. ಚುನಾವಣೆಯಲ್ಲಿ ನಮ್ಮ ಕೆಲಸವನ್ನು ನಾವು ಮಾಡುತ್ತೇವೆ ಎಂದು ತಿಳಿಸಿದರು.