ಬೆಳಗಾವಿ | ಸಭಾಧ್ಯಕ್ಷರ (Chairman) ಕುರಿತು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಸಚಿವ ಜಮೀರ್ ಅಹಮದ್ ಖಾನ್ (Zameer Ahmed Khan) ಅವರ ರಾಜೀನಾಮೆಗೆ ಒತ್ತಾಯಿಸಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೋಮವಾರ ತಮ್ಮ ಸಂಪುಟ ಸಹೋದ್ಯೋಗಿಯನ್ನು ಸಮರ್ಥಿಸಿಕೊಳ್ಳಲು ಪ್ರಯತ್ನಿಸಿದ್ದು, ಅವರು ಉದ್ದೇಶಪೂರ್ವಕವಾಗಿ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.
ತೆಲಂಗಾಣದಲ್ಲಿ ಚುನಾವಣಾ ಪ್ರಚಾರದ ವೇಳೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವರು ಕರ್ನಾಟಕ ವಿಧಾನಸಭೆಯಲ್ಲಿ ಮುಸ್ಲಿಂ ಸ್ಪೀಕರ್ (ಯು ಟಿ ಖಾದರ್) ಮುಂದೆ ಬಿಜೆಪಿ ನಾಯಕರು ತಲೆಬಾಗಿದ್ದಾರೆ, ಕಾಂಗ್ರೆಸ್ ನೀಡಿದ ಅವಕಾಶಕ್ಕೆ ಧನ್ಯವಾದಗಳು ಎಂದು ಹೇಳಿದ್ದರು.
ಸ್ಪೀಕರ್ ಬಗ್ಗೆ ಖಾನ್ ಹೇಳಿಕೆಗೆ ತಿರುಗೇಟು ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ಅವರ ಹೇಳಿಕೆ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ಮತ್ತು ದಲಿತರ ವಿರೋಧಿಯಾಗಿದ್ದು, ಅವರನ್ನು ಲಘುವಾಗಿ ಪರಿಗಣಿಸಬಾರದು ಎಂದಿದ್ದಾರೆ.
ಏತನ್ಮಧ್ಯೆ, ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ವಿಧಾನಸಭೆ ಚುನಾವಣೆ ಫಲಿತಾಂಶಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ತೆಲಂಗಾಣದಲ್ಲಿ ನಾವು ಗೆದ್ದಿದ್ದೇವೆ, ಮೂರು ರಾಜ್ಯಗಳಲ್ಲಿ ನಾವು ಸೋತಿದ್ದೇವೆ, ಜನರ ತೀರ್ಮಾನವೇ ಅಂತಿಮ, ನಾವು ಅದನ್ನು ಸ್ಪೋರ್ಟಿವ್ ಆಗಿ ತೆಗೆದುಕೊಳ್ಳುತ್ತೇವೆ ಮತ್ತು ನಾವು ಕಲಿಯುತ್ತೇವೆ ಎಂದಿದ್ದಾರೆ.