Thursday, December 12, 2024
Homeಜಿಲ್ಲೆಬೆಂಗಳೂರು ನಗರSM Krishna Death | ಕರ್ನಾಟಕ ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಎಸ್ ಎಂ...

SM Krishna Death | ಕರ್ನಾಟಕ ಕಂಡ ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇನ್ನಿಲ್ಲ

ಬೆಂಗಳೂರು | ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ (SM Krishna Death) ಇಂದು ನಸುಕಿನ ಜಾವ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ನಿಧನರಾಗಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದ ಕಾರಣ ಅವರನ್ನು ಅಕ್ಟೋಬರ್ 19ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿದ್ದು, ಇಂದು ನಸುಕಿನ ಜಾವ 2.30ರ ಸುಮಾರಿಗೆ ಕೊನೆಯುಸಿರು ಎಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸುವೆ.

ಎಸ್ ಎಂ ಕೃಷ್ಣ ಕುಟುಂಬದ ಮತ್ತು ಶಿಕ್ಷಣ

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ 1932ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಎಸ್ಎಂ ಕೃಷ್ಣ ಜನಿಸಿದರು. ಇವರ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾ ಶಾಲೆಯಲ್ಲಿ ಪ್ರೌಢ ಶಿಕ್ಷಣ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಬ್ಯಾಚುಲರ್ ಆಫ್ ಆರ್ಟ್ಸ್, ಯುನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು. ಅಮೆರಿಕಾದ ಟೆಕ್ಸಾಸ್ ನ ಡಲ್ಲಾಸ್ ನ ಲಾ ಸ್ಕೂಲ್ ನಲ್ಲಿ ಪದವಿ ಪಡೆದಿದ್ದರು.

ಎಸ್ ಎಂ ಕೃಷ್ಣ ರಾಜಕೀಯ

ಎಸ್ ಎಂ ಕೃಷ್ಣ ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರು 1999 ರಿಂದ 2004 ರವರೆಗೆ ಕರ್ನಾಟಕದ ಮುಖ್ಯಮಂತ್ರಿ ಆಗಿದ್ದರು. ಭಾರತದ ರಾಜ್ಯಪಾಲರಾಗಿ ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ಕರ್ನಾಟಕದ ಅತ್ಯಂತ ಹೆಚ್ಚು ಸುಶೀಕ್ಷಿತ ಮುಖ್ಯಮಂತ್ರಿಗಳಲ್ಲಿ ಎಸ್ ಎಂ ಕೃಷ್ಣ ಕೂಡ ಒಬ್ಬರು. ಬದಲಾದ ರಾಜಕೀಯ ಸನ್ನಿವೇಶಗಳ ಕಾರಣ 2018ರ ಮಾರ್ಚ್ ನಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments