Thursday, December 12, 2024
Homeಜಿಲ್ಲೆಬೆಂಗಳೂರು ನಗರಸುದೀಪ್ ರಾಜಕಾರಣಿ ಅಲ್ಲ, ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ : ಬಸವರಾಜ ಬೊಮ್ಮಾಯಿ‌

ಸುದೀಪ್ ರಾಜಕಾರಣಿ ಅಲ್ಲ, ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ : ಬಸವರಾಜ ಬೊಮ್ಮಾಯಿ‌

ಬೆಂಗಳೂರು | ರಾಜ್ಯದ ಆರ್ಥಿಕ ಸ್ಥಿತಿ ಹಾಳು ಮಾಡದೇ ಜನರ ಕಲ್ಯಾಣ ಆಗಲಿ. ಪಕ್ಷಕ್ಕೆ ಆದ ಹಿನ್ನೆಡೆಯ ಜವಾಬ್ದಾರಿ ನಾನೇ ಹೊರುತ್ತೇನೆ. ವಿರೋಧ ಪಕ್ಷದಲ್ಲಿದ್ದು ಸಮರ್ಪಕವಾಗಿ ಕೆಲಸ ಮಾಡುತ್ತೇವೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಂಡಿದ್ದೇವೆ. ಪಕ್ಷಕ್ಕೆ ಆದ ಹಿನ್ನೆಡೆಯ ಜವಬ್ದಾರಿ ನಾನೇ ಹೊರುತ್ತೇನೆ. ಕಳೆದ ಬಾರಿ ನನಗೆ 104 ಸೀಟು ಬಂದಿತ್ತು. ಈ ಬಾರಿ ಪರ್ಸೆಂಟೇಜ್ ಜಾಸ್ತಿ ಬಂದರು, ಕಡಿಮೆ ಸೀಟು ಬಂದಿವೆ. ಏನೇ ಆಗಲಿ ಸೋಲು ಸೋಲು. ನಾವು ಇದರ ಬಗ್ಗೆ ಆತ್ಮವಲೋಕನ ಮಾಡಿ, ಎಲ್ಲಿ ತಪ್ಪು ಆಗಿದೆ ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇವೆ ಎಂದರು.

ನಮ್ಮದು ಒಂದು ರಾಷ್ಟ್ರೀಯ ಪಕ್ಷ. ನಾವು ಕೇವಲ ಚುನಾವಣೆಗೆ ಮಾತ್ರ ಕೆಲಸ ಮಾಡಲ್ಲ. ರಾಷ್ಟ್ರದ ನಿರ್ಮಾಣಕ್ಕೆ ಕೆಲಸ ಮಾಡುತ್ತೇವೆ. ಇನ್ನೇನು ಕೇವಲ 8 ರಿಂದ 10 ತಿಂಗಳಲ್ಲಿ ಲೋಕಸಭೆ ಚುನಾವಣೆ ಬರುತ್ತಿದೆ. ಆ ಚುನಾವಣೆಗೆ ಪಕ್ಷ ಗಟ್ಟಿಗೊಳಿಸುವ ಕೆಲಸ ಮಾಡುತ್ತೇವೆ. ಈ ಚುನಾವಣೆ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿ ಅಲ್ಲ ಎಂದರು.

ನಾವು ಹಿಂದೆ ಎಷ್ಟೋ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳನ್ನು ನೋಡಿದ್ದೇವೆ. ಸೋಲಿಗೆ ಹಲವಾರು ರೀತಿಯ ಕಾರಣಗಳು ಇವೆ. ಅವುಗಳನ್ನು ಎಲ್ಲವನ್ನೂ ಕುಳಿತು ಚರ್ಚೆ ಮಾಡುತ್ತೇವೆ. ಏನು ವ್ಯತ್ಯಾಸ ಆಗಿದೆ, ಎಲ್ಲಿ ಏನಾಗಿದೆ ಎಂದು ಚರ್ಚಿಸಿ, ಆಗಿದ್ದ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದರು.

ಸುದೀಪ್ ರಾಜಕಾರಣಿ ಅಲ್ಲ

ಸೋಲಿಗೆ ಅವರನ್ನು ಹೊಣೆ ಅನ್ನುವುದು ಸರಿಯಲ್ಲ‌. ನಾನು ಈಗಾಗಲೇ ಹೇಳಿದ್ದೇನೆ. ಈ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments