ಮನರಂಜನೆ | ಇತ್ತೀಚೆಗಷ್ಟೆ ಡೇರ್ ಡೆವಿಲ್ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯ್ತಿ ನೀಡಬೇಕು ಎಂದು ಚಿತ್ರತಂಡ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಮನವಿ ಮಾಡಿತ್ತು. ಇದೀಗ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ಉತ್ತಮ ರೀತಿಯಲ್ಲಿ ಸ್ಪಂದಿಸಿದೆ.
ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ “ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂಥದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳು. ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ ಎಂದು ಹೇಳಿದ್ದಾರೆ.