ತುಮಕೂರು | ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ರಾಷ್ಟ್ರೀಯ ಹೆದ್ದಾರಿ-48 ಸರ್ವೀಸ್ ರಸ್ತೆ ಅಂತರಸನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಸ್ಥಗಿತಗೊಂಡಿರುವ ESSAR ಕಂಪನಿಯ ಪೆಟ್ರೋಲ್ ಬಂಕ್ ಮುಂಭಾಗ ಮೇ 24 ರಂದು ಬೆಳಿಗ್ಗೆ 10.45 ಗಂಟೆ ಸಮಯದಲ್ಲಿ ಸುಮಾರು 50 ವರ್ಷದ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ಈತನ ವಾರಸುದಾರರ ಬಗ್ಗೆ ತಿಳಿದು ಬಂದಿರುವುದಿಲ್ಲ.
ಮೃತನು 168 ಸೆಂ.ಮೀ. ಎತ್ತರ, ದುಂಡು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಈತನ ಮೈಮೇಲೆ ಖಾಕಿ ಬಣ್ಣದ ಅಂಗಿ, ಕೇಸರಿ ಬಣ್ಣದ ಟವಲ್ ಇರುತ್ತದೆ.
ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೂ.ವಾ.ಸಂ. 0816-2278381, ಮೊ.ಸಂ. 9480802948-31ನ್ನು ಸಂಪರ್ಕಿಸಬೇಕೆಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನವಿ ಮಾಡಿದ್ದಾರೆ.