ತುಮಕೂರು | ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಅಳವಡಿಸಿದ್ದ ನಾಮಫಲಕಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ (Tumkur accident). ಡಿಕ್ಕಿಯಾದ ರಭಸಕ್ಕೆ ಪಲ್ಟಿಯಾಗಿದ್ದು, ಖಾಸಗಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತ ಚಾಲಕನನ್ನು ಮಹಮ್ಮದ್ ಇಬ್ರಾಹಿಂ (40) ಎಂದು ಗುರುತಿಸಲಾಗಿದೆ. ಇದೇ ವೇಳೆ ಸುಮಾರು 8 ಜನ ಪ್ರಯಾಣಿಕರಿಗೆ ಗಾಯಗಳಾಗಿವೆ.
ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಅಂಚೆಪಾಳ್ಯ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಈ ಘಟನೆ ನಡೆದಿದೆ. ಉಡುಪಿಯಿಂದ ಕುಣಿಗಲ್ ಮಾರ್ಗವಾಗಿ ಬೆಂಗಳೂರು ಕಡೆಗೆ ಹೊರಟ್ಟಿದ್ದ ಖಾಸಗಿ ಬಸ್. ತಾಲ್ಲೂಕಿನ ಅಂಚೆಪಾಳ್ಯ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಳವಡಿಸಿರುವ ನಾಮಫಲಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಬಸ್ ಪಲ್ಟಿಯಾಗಿದ್ದು, ಬಸ್ ನಡಿ ಸಿಲುಕಿ ಬಸ್ ಚಾಲಕ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಯಾಳುಗಳಿಗೆ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಮೃತದೇಹ ಕುಣಿಗಲ್ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.