ತುಮಕೂರು | ದೇವಸ್ಥಾನದಲ್ಲಿ (Temple) ದೀಪ ಹಚ್ಚಲು ಹೋಗಿ ಬೆಂಕಿ ಅವಘಡಕ್ಕೆ (Fire accident) ಒಳಗಾದ ವಿದ್ಯಾರ್ಥಿನಿ (student) ಇದೀಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.
ತುಮಕೂರು (Tumkur) ಜಿಲ್ಲೆ ಶಿರಾ ತಾಲೂಕಿನ ಮೇಳೆಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ದೀಕ್ಷ ಮತ್ತು ಆಕೆಯ ಸ್ನೇಹಿತರು ಮಧ್ಯಾಹ್ನದ ಬಿಸಿ ಊಟದ ನಂತರ ಸಮೀಪದಲ್ಲಿ ಇದ್ದ ದೇವಸ್ಥಾನಕ್ಕೆ ಹೋಗಿದ್ದರು.
ಈ ವೇಳೆ ದೇವರ ದೀಪ ಹಚ್ಚುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗಲಿ ಇಡೀ ಬೆಂಕಿ ದೇಹವನ್ನೆಲ್ಲ ವ್ಯಾಪಿಸಿತ್ತು. ಘಟನೆಯಲ್ಲಿ ಶೇ 60ರಷ್ಟು ಆಕೆಗೆ ಸುಟ್ಟ ಗಾಯಗಳಾಗಿದ್ದವು. ತಕ್ಷಣವೇ ಸ್ಥಳೀಯರು ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾರೆ.
ವಿದ್ಯಾರ್ಥಿನಿಯ ಸಾವಿಗೆ ಶಿಕ್ಷಕರ ನಿರ್ಲಕ್ಷವೇ ಕಾರಣ ಎಂದು ಸ್ಥಳೀಯರು ಆರೋಪ ಮಾಡಿದ್ದು, ಅವರನ್ನು ಕೂಡಲೇ ಸೇವೆಯಿಂದ ವಜಾ ಮಾಡಬೇಕು ಎಂದು ಸ್ಥಳೀಯರು ಸೇರಿದಂತೆ ಪೋಷಕರು ಒತ್ತಾಯ ಮಾಡಿದ್ದಾರೆ.