ತುಮಮಕೂರು | ತುಮಕೂರು (Tumkur) ಲೋಕಸಭಾ ಚುನಾವಣಾ (Lok Sabha Election) ಕ್ಷೇತ್ರಕ್ಕೆ ಮಾಜಿ ಸಚಿವ ವಿ. ಸೋಮಣ್ಣ (V. Somanna) ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರ ಎಲ್ಲೆಡೆ ಭಾರಿ ಕುತೂಹಲ ಮೂಡಿಸಿರುವ ಹೊತ್ತಲ್ಲೇ ಬಿ. ವೈ. ವಿಜಯೇಂದ್ರ (B. Y. Vijayendra) ವಿ. ಸೋಮಣ್ಣ ಸ್ಪರ್ಧೆ ವಿಚಾರವಾಗಿ ಸ್ಪಷ್ಟನೆಯನ್ನು ನೀಡಿದ್ದಾರೆ.
ತುಮಕೂರು ಲೋಕಸಭಾ ಚುನಾವಣಾ ಕಣಕ್ಕೆ ಮಾಜಿ ಸಚಿವ ವಿ. ಸೋಮಣ್ಣ ಸ್ಪರ್ಧೆ ಮಾಡುವ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಮಾತನಾಡಿ, ವಿ. ಸೋಮಣ್ಣ ತುಮಕೂರಿನಲ್ಲಿ ಸ್ಪರ್ಧೆ ಮಾಡುವ ವಿಚಾರವಾಗಿ ಕಾರ್ಯಕರ್ತರ ಅಭಿಪ್ರಾಯವನ್ನು ಸಂಗ್ರಹಿಸಿ ಆ ನಂತರ ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಒಟ್ಟಾರೆ ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಅಭ್ಯರ್ಥಿ ಯಾರು ಎಂಬ ಕುತೂಹಲ ಮೂಡಿದ್ದು, ಮುಂದಿನ ದಿನಗಳಲ್ಲಿ ವಿ. ಸೋಮಣ್ಣ ಅವರೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರಾ..? ಅಥವಾ ಬೇರೊಬ್ಬ ಅಭ್ಯರ್ಥಿ ಅಖಾಡಕ್ಕೆ ಇಳಿಯುತ್ತಾರ..? ಕಾದು ನೋಡಬೇಕಿದೆ.