ತುಮಕೂರು | ನಗರದ (Tumkur) ಎಸ್ ಮಾಲ್ (S Mall) ಬಳಿ ಸೇತುವೆ ನಿರ್ಮಾಣ (Bridge construction) ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿರಾಗೇಟ್‌ನಿಂದ ನಗರ ಬಸ್ ನಿಲ್ದಾಣಕ್ಕೆ ನೂತನ ಸಾರಿಗೆ ಸೌಲಭ್ಯ (New transport facility) ಕಲ್ಪಿಸಲಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.
ನೂತನ ಸಾರಿಗೆ ಬಸ್ ಕಾರ್ಯಾಚರಣೆಯು ಇಂದಿನಿಂದ ಪ್ರಾರಂಭವಾಗಿದ್ದು, ಪ್ರತಿ ದಿನ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ತುಮಕೂರು ಬಸ್ ನಿಲ್ದಾಣ-ಸಿರಾಗೇಟ್-ತುಮಕೂರು ಬಸ್ ನಿಲ್ದಾಣಕ್ಕೆ ಸತ್ಯಮಂಗಲ, ಹನುಮಂತಪುರ, ಕೋತಿತೋಪು ಮಾರ್ಗವಾಗಿ ಪ್ರತಿ 20 ನಿಮಿಷಕ್ಕೊಂದರಂತೆ ಸಂಚರಿಸಲಿದೆ.
ಜಿಲ್ಲಾಧಿಕಾರಿಗಳ ಸೂಚನೆಯನ್ವಯ ಸಾರ್ವಜನಿಕ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ನೂತನ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದ್ದು, 10 ರೂ.ಗಳ ಪ್ರಯಾಣ ದರ ನಿಗಧಿ ಪಡಿಸಲಾಗಿದೆ. ಸಾರ್ವಜನಿಕ ಪ್ರಯಾಣಿಕರು ಮತ್ತು ವಿದ್ಯಾರ್ಥಿಗಳು ನೂತನ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.