ತುಮಕೂರು | ಪಾಲಿಕೆ (Tumkur Corporation) ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ತಮ್ಮ ಉದ್ದಿಮೆಯ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡವನ್ನು (Mandatory Kannada on nameplates) ಬಳಸಬೇಕು. ತಪ್ಪಿದಲ್ಲಿ ಉದ್ದಿಮೆಗಳ ಪರವಾನಗಿಗಳನ್ನು ರದ್ದುಪಡಿಸಿ (Cancellation of licenses of enterprises) ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ಅಶ್ವಿಜ ಬಿ.ವಿ. ಅವರು ತಿಳಿಸಿದ್ದಾರೆ.
Tumkur News | ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ರೌಡಿ ಶೀಟರ್ ಗೆ ಗುಂಡು ಹೊಡೆದ ಖಾಕಿ ಪಡೆ..! – karnataka360.in
ಕರ್ನಾಟಕ ರಾಜ್ಯದಲ್ಲಿ ಕನ್ನಡವು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮಫಲಕಗಳಲ್ಲಿ ಕನ್ನಡವನ್ನು ಬಳಸುವುದು ಕಡ್ಡಾಯವಾಗಿದೆ. ಕನ್ನಡ ಬಳಕೆಯ ಸಮಗ್ರ ಅನುಷ್ಟಾನಕ್ಕೆ ಸಂಬಂಧಿಸಿದಂತೆ ಅಂಗಡಿ, ಮತ್ತಿತರ ಉದ್ದಿಮೆಗಳ ಪರವಾನಗಿ ನೀಡುವಾಗ ನಾಮಫಲಕಗಳಲ್ಲಿ ಅಗ್ರಸ್ಥಾನದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸದಿದ್ದರೆ ಉದ್ದಿಮೆ ಪರವಾನಗಿಗಳನ್ನು ರದ್ದುಪಡಿಸಲಾಗುವುದು ಎಂದು ನಿರ್ಬಂಧ ವಿಧಿಸಲು ಸರ್ಕಾರ ಆದೇಶ ನೀಡಿದೆ.
ಸರ್ಕಾರದ ಆದೇಶದನ್ವಯ ಯಾವುದೇ ಉದ್ದಿಮೆಯ ನಾಮಫಲಕವು ಪ್ರಧಾನವಾಗಿ ಕನ್ನಡದಲ್ಲಿರತಕ್ಕದ್ದು. ನಾಮಫಲಕದಲ್ಲಿ ಅಗ್ರ ಪಂಕ್ತಿಯಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಬೇಕು. ಅಶ್ಲೀಲ ಭಾಷೆ ಹಾಗೂ ಚಿತ್ರಗಳನ್ನು ಪ್ರದರ್ಶಿಸುವಂತಿಲ್ಲ. ಅನ್ಯಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕ ದೊಡ್ಡದಾಗಿರುವಂತೆ ಅಳವಡಿಸಬೇಕು.
ಈ ಪ್ರಕಟಣೆ ಹೊರಡಿಸಿದ 15 ದಿನಗಳೊಳಗಾಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ಉದ್ದಿಮೆಗಳ ನಾಮಫಲಕಗಳು ಪ್ರಧಾನವಾಗಿ ಕನ್ನಡದಲ್ಲಿರಬೇಕು. ತಪ್ಪಿದಲ್ಲಿ ಅಂತಹ ಉದ್ದಿಮೆಗಳ ಉದ್ದಿಮೆ ಪರವಾನಗಿಗಳನ್ನು ರದ್ದುಪಡಿಸುವುದರ ಜೊತೆಗೆ ಉದ್ದಿಮೆಯನ್ನು ಸ್ಥಗಿತಗೊಳಿಸಲು ಕ್ರಮವಹಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.