ತುಮಕೂರು | ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡು ಅಡುಗೆ ಸಹಾಯಕಿಗೆ ಗಂಭೀರ ಗಾಯಗಳಾಗಿರುವಂತಹ ಘಟನೆ ತುಮಕೂರು (Tumkur School News) ಜಿಲ್ಲೆಯ ಮಧುಗಿರಿ ತಾಲೂಕಿನ ಪುರವರ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ.
ಅಡುಗೆ ಸಹಾಯಕಿಗೆ ಉಮಾದೇವಿ (52) ಯವರಿಗೆ ಗಂಭೀರ ಗಾಯಗಳಾಗಿದ್ದು ಸುಮಾರು 30% ದೇಹಕ್ಕೆ ಸುಟ್ಟಿದೆ. ಮತ್ತೋರ್ವ ಅಡಿಗೆ ಸಹಾಯಕಿ ಜಯಮ್ಮ (55) ಎಂಬುವವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಅಡುಗೆ ಸಹಾಯಕಿಗೆ ಮಧುಗಿರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಧ್ಯಾಹ್ನ ಬಿಸಿಯೂಟ ತಯಾರಿಸುವಾಗ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ತಕ್ಷಣವೇ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗುಣಮಟ್ಟದ ಕುಕ್ಕರ್ ಕೊಡದೆ ಇರುವುದು ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಇದೆ ವೇಳೆ ಮೇಲಾಧಿಕಾರಿಗಳಿಂದ ಪ್ರಕರಣವನ್ನ ಮುಚ್ಚಿಹಾಕಲು ಯತ್ನ ನಡೆದಿದೆ ಎಂಬ ಆರೋಪವು ಕೇಳಿ ಬಂದಿದೆ. ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.