ತುಮಕೂರು | ತುಮಕೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿಸಿ ಶ್ರೀನಿವಾಸ ಕೆ ಅವರು ಫುಲ್ ಆಕ್ಟೀವ್ ಆಗಿದ್ದಾರೆ. ಪ್ರತಿ ದಿನ ಒಂದೊಂದು ಪ್ರದೇಶಗಳಿಗೆ ಭೇಟಿ ನೀಡುವ ಮೂಲಕ ಅದರ ಬಗ್ಗೆ ಮಾಹಿತಿಯನ್ನು ಪಡೆಯುತ್ತಿದ್ದಾರೆ.
ಹೌದು ಶುಕ್ರವಾರ ಬೆಳಗ್ಗೆಯಿಂದ ಸಂಜೆಯವರೆಗೂ ನಗರ ಮತ್ತು ಜಿಲ್ಲೆಯ ವಿವಿಧ ಸ್ಥಳಗಳಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರತಿಷ್ಠಿತ ಶಾಲೆಗಳಿಗೆ ದಾಖಲಾತಿ ಮಾಡಿಸುವ ಸಂಬಂಧ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಜಂಟಿ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ವಿದ್ಯಾರ್ಥಿ ಮತ್ತು ಪೋಷಕರು ಪಾಲ್ಗೊಂಡಿದ್ದರು.
ನಂತರ ಅವರು ತುಮಕೂರು ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಭೇಟಿ ಕೊಟ್ಟು ನಿಲ್ದಾಣದ ಸ್ವಚ್ಛತೆ ಮಹಿಳಾ ವಿಶ್ರಾಂತಿ ಕೊಠಡಿ ಗಳಿಗೆ ಭೇಟಿ ನೀಡಿ ಸ್ವಚ್ಛತೆಯ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ನಂತರ ತುಮಕೂರು ನಗರದಲ್ಲಿ ನಿರ್ಮಿಸುತ್ತಿರುವ ಹೊಸ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು ಹಾಗೂ ಕೆ ಎಸ್ ಆರ್ ಟಿ ಸಿ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಕುಣಿಗಲ್ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್ ಗೆ ದಿಢೀರ್ ಭೇಟಿ ನೀಡಿ ಆಹಾರದ ಗುಣಮಟ್ಟ, ಕುಡಿಯುವ ನೀರಿನ ಶುಚಿತ್ವ ಮತ್ತು ಇಂದಿರಾ ಕ್ಯಾಂಟೀನ್ ಸ್ವಚ್ಛತೆ ಶೌಚಾಲಯದ ಶುಚಿತ್ವ ಹಾಗೂ ಸಿ ಸಿ ಕ್ಯಾಮರಗಳ ಕಾರ್ಯವೈಖರಿಯನ್ನು ಪರಿಶೀಲಿಸಿದರು ಮತ್ತು ಪುರಸಭೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.
ಸಂಜೆ ಸ್ಮಾರ್ಟ್ ಸಿಟಿ ವತಿಯಿಂದ ನಿರ್ಮಿಸಲಾಗಿರುವ ತುಮಕೂರಿನ ಕ್ರೀಡಾಂಗಣಕ್ಕೆ ಭೇಟಿ ನೀಡಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ವೀಕ್ಷಿಸಿದರು.
ಒಟ್ಟಾರೆಯಾಗಿ ನಡೆಯುತ್ತಿರುವ ಕಾಮಗಾರಿಗಳಿಗೆ ವೇಗ ನೀಡಿರುವ ನೂತನ ಜಿಲ್ಲಾಧಿಕಾರಿಗಳು ಸಾಮಾಜಿ ಜಾಲತಾಣದ ಮೂಲಕ ಜನಸಾಮಾನ್ಯರಿಗೆ ಹತ್ತಿರವಾಗುವ ಮತ್ತು ತಮ್ಮ ಕಾರ್ಯ ವೈಖರಿ ತಿಳಿಸುವ ಪ್ರಯತ್ನ ಮಾಡುತ್ತಿದ್ದಾರೆ.