ತುಮಕೂರು | ತುರುವೇಕೆರೆ (Turuvekere) ತಾಲ್ಲೂಕು ಕೊಂಡಜ್ಜಿ ಗ್ರಾಮದಲ್ಲಿ (Kondajji village) ಚಿರತೆ (leopard) ಕಾಣಿಸಿಕೊಂಡಿರುವ ಬಗ್ಗೆ ಗ್ರಾಮಸ್ಥರಿಂದ ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ (Subha Kalyan) ಅದೇ ಗ್ರಾಮದ ರೈತ ಬಸವಲಿಂಗಯ್ಯ (Farmer Basavalingaiah) ಅವರ ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿದರು.
ಚಿರತೆಯನ್ನು ಸೆರೆ ಹಿಡಿಯಲು ಇಟ್ಟಿದ್ದ ಬೋನಿಗೆ ಪ್ರತಿ ನಿತ್ಯ ರಾತ್ರಿ ಆಹಾರ ಇಡಬೇಕು. ಆಹಾರವನ್ನರಸಿ ಬರುವ ಚಿರತೆ ಬೋನಿನಲ್ಲಿ ಸೆರೆಯಾಗಲಿದೆ ಎಂದು ವಲಯ ಅರಣ್ಯಾಧಿಕಾರಿ ಸಿ.ಆರ್. ಅರುಣ್ ಅವರಿಗೆ ನಿರ್ದೇಶನ ನೀಡಿದರಲ್ಲದೆ, ಸಂಜೆ ವೇಳೆ ನಂತರ ಈ ಪ್ರದೇಶದಲ್ಲಿ ಒಂಟಿಯಾಗಿ ತಿರುಗಾಡಬಾರದು. ಮಕ್ಕಳನ್ನು ಹೊರಗಡೆ ಬಿಡಬಾರದೆಂದು ಗ್ರಾಮಸ್ಥರಲ್ಲಿ ಮನವಿ ಮಾಡಿದರು.