Tuesday, February 4, 2025
Homeಜಿಲ್ಲೆತುಮಕೂರುUnion Budget 2025 | ವೈದ್ಯಕೀಯ ಕ್ಷೇತ್ರಕ್ಕೆ ಕೇಂದ್ರ ಬಜೆಟ್ ಮಹತ್ತರ ಕೊಡುಗೆ –  ಡಾ....

Union Budget 2025 | ವೈದ್ಯಕೀಯ ಕ್ಷೇತ್ರಕ್ಕೆ ಕೇಂದ್ರ ಬಜೆಟ್ ಮಹತ್ತರ ಕೊಡುಗೆ –  ಡಾ. ಎಸ್ ಪರಮೇಶ್

ತುಮಕೂರು | ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಯಶಸ್ವಿಯಾಗಿ 8ನೇ ಬಾರಿ 2025-26ನೇ ಬಜೆಟ್ ಮಂಡನೆ (Union Budget 2025) ಮಾಡಿದ್ದಾರೆ. ಈ ಬಜೆಟ್ ನಲ್ಲಿ ಮಧ್ಯಮ ವರ್ಗ, ಬಡವರು ಹಾಗು ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ಕೊಡಲಾಗಿದೆ. ದೇಶದ ಮುಂದಾಲೋಚನೆ ಗುರಿ ಇಟ್ಟುಕೊಂಡು ಮಂಡಿಸಲಾಗಿರುವ ಬಜೆಟ್ ಇದಾಗಿದೆ. ಜೊತೆಗೆ ಆರೋಗ್ಯ ಕ್ಷೇತ್ರಕ್ಕೂ ಕೂಡ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಲಾಗಿದೆ ಎಂದು ತುಮಕೂರು ಶ್ರೀ ಸಿದ್ದಗಂಗಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕರಾದ ಡಾ. ಎಸ್ ಪರಮೇಶ್ ಅಭಿಪ್ರಾಯಪಟ್ಟರು.

ಈ ಬಗ್ಗೆ ಕರ್ನಾಟಕ 360 ವೆಬ್ ಪೋರ್ಟಲ್ ಗೆ ಮಾಹಿತಿ ನೀಡಿದ ಅವರು, ಆರೋಗ್ಯ ಕ್ಷೇತ್ರಕ್ಕೆ 98,311 ಕೋಟಿ ರೂ  ಮೀಸಲಿಟ್ಟಿದ್ದು, ಇದು ಮುಂಬರುವ ದಿನಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಬದಲಾವಣೆಗೆ ಕಾರಣವಾಗಲಿದೆ. ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಬಳಕೆಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಇದನ್ನು ಓದಿ : Siddaganga Hospital | ಸಿದ್ದಗಂಗಾ ಆಸ್ಪತ್ರೆಯಲ್ಲಿ ಡಾ. ಪರಮೇಶ್ ರವರಿಂದ ಗಣರಾಜ್ಯೋತ್ಸವ ಧ್ವಜಾರೋಹಣ..!

ಜೀವ ರಕ್ಷಕ ಔಷಧಿಗಳಿಗೆ ಕಸ್ಟಮ್ಸ್ ಸುಂಕದಲ್ಲಿ ರಿಯಾಯಿತಿ

ರೋಗಿಗಳಿಗೆ, ವಿಶೇಷವಾಗಿ ಕ್ಯಾನ್ಸರ್, ಅಪರೂಪದ ಕಾಯಿಲೆಗಳು ಮತ್ತು ಇತರ ತೀವ್ರವಾದ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಪರಿಹಾರ ಒದಗಿಸಲು, ಮೂಲ ಕಸ್ಟಮ್ಸ್ ಸುಂಕದಿಂದ (ಬಿಸಿಡಿ) ಸಂಪೂರ್ಣವಾಗಿ ವಿನಾಯಿತಿ ಪಡೆದ ಔಷಧಿಗಳ ಪಟ್ಟಿಗೆ 36 ಜೀವ ರಕ್ಷಕ ಔಷಧಿಗಳನ್ನು ಸೇರಿಸಲು ಸರ್ಕಾರ ಪ್ರಸ್ತಾಪಿಸಿದೆ. 6 ಜೀವ ಉಳಿಸುವ ಔಷಧಿಗಳನ್ನು ಈ ಪಟ್ಟಿಗೆ ಸೇರಿಸಲಾಗಿದ್ದು ಇದಕ್ಕೆ ಕಸ್ಟಮ್ಸ್ ಸುಂಕದಲ್ಲಿ 5% ರಿಯಾಯಿತಿ ನೀಡಲಾಗುತ್ತದೆ. ಜೊತೆಗೆ ಈ ಔಷಧಿಗಳನ್ನು ತಯಾರಿಸಲು ಬಳಸುವ ಬೃಹತ್ ಔಷಧಿಗಳಿಗೂ ಸಂಪೂರ್ಣ ವಿನಾಯಿತಿ ಮತ್ತು ರಿಯಾಯಿತಿ ಸುಂಕ ಅನ್ವಯಿಸುತ್ತದೆ. ಇದು ರೋಗಿಗಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ಮುಂದಿನ 3 ವರ್ಷಗಳಲ್ಲಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಯೋಜಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ನಿರ್ದಿಷ್ಟವಾಗಿ, 2025-26ರ ಆರ್ಥಿಕ ವರ್ಷದಲ್ಲಿ ಇಂತಹ 200 ಕೇಂದ್ರಗಳನ್ನು ಸ್ಥಾಪಿಸುವ ನಿರೀಕ್ಷೆಯಿದೆ. ಈ ಕ್ರಮವು ದೇಶಾದ್ಯಂತ ಕ್ಯಾನ್ಸರ್ ಚಿಕಿತ್ಸೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಜನರಿಗೆ ಆರೋಗ್ಯ ಭಾಗ್ಯ ಕರುಣಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಕೇಂದ್ರ ಸರ್ಕಾರ ಇದೀಗ ಪ್ರತಿ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇಕೇರ್ ಕ್ಯಾನ್ಸರ್ ಕೇಂದ್ರಗಳನ್ನು ಆರಂಭಿಸುವುದಾಗಿ ಘೋಷಣೆ ಮಾಡಿರುವುದು ಎಲ್ಲಾ ವರ್ಗದ ಜನರಿಗೂ ಅನುಕೂಲ ಮಾಡಿಕೊಡಲಿದೆ ಎಂದರು.

10,000 ಹೊಸ ವೈದ್ಯಕೀಯ ಸೀಟುಗಳ (Union Budget 2025) ಘೋಷಣೆ

ನಾನು ಈಗಾಗಲೇ ಒತ್ತಾಯ ಮಾಡಿದಂತೆ ಕೇಂದ್ರ ಸರ್ಕಾರವು ಮುಂದಿನ ಹಣಕಾಸು ವರ್ಷದಲ್ಲಿ ದೇಶಾದ್ಯಂತ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ 10,000 ಹೊಸ ಸೀಟುಗಳನ್ನು ಸೇರಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್​ನಲ್ಲಿ ಘೋಷಿಸಿದ್ದಾರೆ ಇದು ಮುಂದಿನ ದಿನಗಳಲ್ಲಿ ಆರೋಗ್ಯ ಭಾರತ ನಿರ್ಮಾಣ ಮಾಡುವುದರಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅಭಿಪ್ರಾಯ ಪಟ್ಟರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments