ತುಮಕೂರು | ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ (Shivakumar Mahaswamiji) 117ನೇ ಜನ್ಮ ಜಯಂತೋತ್ಸವದಂದು ತುಮಕೂರು (Tumkur) ಲೋಕಸಭಾ ಕ್ಷೇತ್ರದ ಬಿಜೆಪಿ – ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ (V. Somanna) ಅವರು ಸಾಂಕೇತಿಕವಾಗಿ ನಾಮಪತ್ರ (nomination) ಸಲ್ಲಿಕೆ ಮಾಡಿದ್ದಾರೆ.
ತುಮಕೂರಿನ ಶ್ರೀ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಅಭ್ಯರ್ಥಿ ಸೋಮಣ್ಣ ಅವರು ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಚುನಾವಣಾಧಿಕಾರಿ ಶುಭ ಕಲ್ಯಾಣ್ ಅವರಿಗೆ ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ.
ವಿ ಸೋಮಣ್ಣ ಅವರು ಅಧಿಕೃತವಾಗಿ ಏಪ್ರಿಲ್ 3 ರಂದು ತಮ್ಮ ಬೆಂಬಲಿಗರು, ಹಿತೈಷಿಗಳ ಜೊತೆ ಬೃಹತ್ ರ್ಯಾಲಿಯೊಂದಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇನ್ನೂ ಸಾಂಕೇತಿಕವಾದ ನಾಮಪತ್ರ ಸಲ್ಲಿಕೆಗೆ ಬಿಜೆಪಿ ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಜೆಡಿಎಸ್ ಶಾಸಕರಾದ ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಸಾಥ್ ನೀಡಿದ್ದರು.