Thursday, December 12, 2024
HomeಸಿನಿಮಾVijay New Political Party | ಹೊಸ ಪಕ್ಷ ಘೋಷಣೆ ಮಾಡಿ ಸಿನಿಮಾ ಬಿಟ್ಟು ರಾಜಕೀಯಕ್ಕೆ...

Vijay New Political Party | ಹೊಸ ಪಕ್ಷ ಘೋಷಣೆ ಮಾಡಿ ಸಿನಿಮಾ ಬಿಟ್ಟು ರಾಜಕೀಯಕ್ಕೆ ಇಳಿದ ನಟ ವಿಜಯ್..!

ಮನರಂಜನೆ | ತಮಿಳು ಸ್ಟಾರ್ ನಟ ವಿಜಯ್ (Actor Vijay) ರಾಜಕೀಯಕ್ಕೆ (Politics) ಬರುವುದಿಲ್ಲ ಎಂದು ಇಲ್ಲಿಯವರೆಗೂ ಹೇಳಲಾಗುತ್ತಿತ್ತು. ಆದರೆ ಇಂದು ಬದಲಾದ ಕಾಲಘಟ್ಟದಲ್ಲಿ ರಾಜಕೀಯಕ್ಕೆ (Politics) ಎಂಟ್ರಿ ಕೊಟ್ಟಿದ್ದಾರೆ. ಹೌದು,,, ಇಡೀ ಭಾರತದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ತಮಿಳು ಸ್ಟಾರ್ ನಟ ವಿಜಯ್ (Actor Vijay) ಹೊಸ ಪಕ್ಷವನ್ನು ಸ್ಥಾಪನೆ ಮಾಡಿದ್ದಾರೆ.

ನಟ ವಿಜಯ್ ರಾಜಕೀಯಕ್ಕೆ ಧುಮುಕಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ತಮ್ಮ ನೂತನ ರಾಜಕೀಯ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (Tamilaga Vetri Association) ಎಂದು ತಮ್ಮ ನೂತನ ರಾಜಕೀಯ ಪಕ್ಷಕ್ಕೆ ಹೆಸರಿಟ್ಟಿದ್ದಾರೆ. ತಮಿಳುನಾಡಿನ ಸಿನಿಮಾ ಹಾಗೂ ರಾಜಕೀಯದಲ್ಲಿ ಇದು ಹೊಸ ತಿರುವು ಪಡೆಯಲಿದೆ ಎಂದು ಹೇಳಲಾಗುತ್ತದೆ.

ನಟ ವಿಜಯ್ ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿಸಲಾಗಿದೆ. ಸುಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಮುಂಬರುವ 2026ರ ತಮಿಳುನಾಡಿನ ವಿಧಾನಸಭೆ ಚುನಾವಣೆಯನ್ನು (Tamil Nadu Assembly Elections) ಗಮನದಲ್ಲಿಟ್ಟುಕೊಂಡು ನಟ ವಿಜಯ್ ಅವರು ‘ತಮಿಳಗ ವೆಟ್ರಿ ಕಳಗಂ’ ಪಕ್ಷ ಸ್ಥಾಪನೆ ಮಾಡಿದ್ದಾರೆ. ಅದಕ್ಕಾಗಿ ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಿಕೊಳ್ಳುತ್ತಿದ್ದಾರೆ.

ಸಿನಿಮಾವನ್ನು ಹೊರತುಪಡಿಸಿ ನಟ ವಿಜಯ್ ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡಿದ್ದಾರೆ. 2018ರಲ್ಲಿ ತುತ್ತುಕುಡಿ ಪೊಲೀಸ್ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಡಿಸೆಂಬರ್ ನಲ್ಲಿ ಪ್ರವಾಹದಿಂದ ತಮಿಳುನಾಡಿನ ದಕ್ಷಿಣ ಜಿಲ್ಲೆಗಳಲ್ಲಿ ಹಾನಿಯುಂಟಾಗಿದ್ದು ಅಲ್ಲಿಗೆ ಭೇಟಿ ನೀಡಿ ಸಮಸ್ಯೆ ಅರಿಯುವ ಪ್ರಯತ್ನ ಮಾಡಿದ್ದರು. ಇದೆಲ್ಲವನ್ನು ಕೂಡ ನೋಡುತ್ತಿದ್ದರೆ ನಟ ವಿಜಯ್ ಅವರ ರಾಜಕೀಯದ ಜೀವನ ಕಂಡುಬರುತ್ತಿದೆ.

ತಮಿಳುನಾಡು ಮತ್ತು ಕೇರಳ ಸೇರಿದಂತೆ ಅಪಾರ ಅಭಿಮಾನಿಗಳನ್ನು ಹೊಂದಿರುವ ನಟನಿಗೆ ಉತ್ತಮ ಬೆಂಬಲ ವ್ಯಕ್ತವಾಗುವ ಮುನ್ಸೂಚನೆ ಕಂಡುಬರುತ್ತಿದೆ.
ಇನ್ನು ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ನಟ ವಿಜಯ್ ಅವರ ನೂತನ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದಿಲ್ಲ, ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ ಎಂದು ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಯಲ್ಲಿ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.

ಸಿನಿಮಾ ನಟ ನಟಿಯರಿಗೆ ತಮಿಳುನಾಡು ರಾಜಕೀಯದಲ್ಲಿ ಉತ್ತಮ ಭವಿಷ್ಯ ಇದೆ. ಅಲ್ಲಿನ ಜನರು ಕೂಡ ನಟರ ಕೈ ಹಿಡಿದಿದ್ದಾರೆ. ಹೀಗಾಗಿ ಮುಂಬರುವ ತಮಿಳುನಾಡಿನ ಭವಿಷ್ಯದ ಹಿನ್ನೆಲೆಯಲ್ಲಿ ನಟ ವಿಜಯ್ ನೂತನ ಪಕ್ಷವನ್ನು ಆರಂಭಿಸಿದ್ದು, ಅವರಿಗೂ ಕೂಡ ಉತ್ತಮ ಬೆಂಬಲ ವ್ಯಕ್ತವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments