ಬೆಂಗಳೂರು | ಬೆಂಗಳೂರಿನಲ್ಲಿ ಸುರಿದ ಮಳೆಗೆ ಭಾನುರೇಖಾ ಎಂಬ ಯುವತಿ ಕೆ. ಆರ್. ಸರ್ಕಲ್ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಸಿಲುಕಿ ಸಾವಿಗೀಡಾದ ಸುದ್ದಿ ತಿಳಿದು ಮನಸಿಗೆ ದುಃಖವಾಯಿತು. ಮೃತ ಯುವತಿಯ ಆತ್ಮಕ್ಕೆ ಶಾಂತಿ ದೊರಕಿಸಿಕೊಡಲಿ, ಆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಹೊಸ ಸರ್ಕಾರ ತಕ್ಷಣವೇ ಕಾರ್ಯಪ್ರವೃತವಾಗಿ ಮಳೆಯಿಂದ ಉಂಟಾಗಬಹುದಾದ ಹಾನಿಯನ್ನು ತಡೆಯಲು ಅಗತ್ಯ ಸಿದ್ದತೆಯನ್ನು ಮಾಡಿಕೊಳ್ಳಲು ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಆದೇಶ ನೀಡಬೇಕು. ಮಳೆಯಿಂದ ಅಮಾಯಕರು ಜೀವ ಕಳೆದುಕೊಳ್ಳುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.